Friday, January 24, 2025
ಸುದ್ದಿ

ಬಿಜೆಪಿ ಶಕ್ತಿ ಕೇಂದ್ರ ಕುತ್ಯಾರು ವತಿಯಿಂದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನೆ – ಕಾರ್ಯಕರ್ತರ ಸಭೆ – ಕಹಳೆ ನ್ಯೂಸ್

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಕುತ್ಯಾರು ವತಿಯಿಂದ ಕಾಪು ವಿಧಾನಸಭಾ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ಕಾರ್ಯಕರ್ತರ ಸಭೆ ಇಂದು ದಿನಾಂಕ 11-06-2023 ರಂದು ಕುತ್ಯಾರು ನವೀನ್ ಶೆಟ್ಟಿ ಅವರ ಮನೆಯ ವಠಾರದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ವಿಧಾನ ಪರಿಷತ್ ಸದಸ್ಯರು ನಿಕಟಪೂರ್ವ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಉಡುಪಿ ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಶಾಸಕರಾದ ಕೆ. ರಘುಪತಿ ಭಟ್, ಬಿಜೆಪಿ ಕಾಪು ಮಂಡಲದ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಸುವರ್ಣ, ಜಿಲ್ಲಾ ಬಿಜೆಪಿ ರೈತ ಮೋರ್ಚಾದ ಅಧ್ಯಕ್ಷರಾದ ಪ್ರವೀಣ್ ಗುರ್ಮೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ನಿಕಟ ಪೂರ್ವ ಜಿಲ್ಲಾಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ ಆಚಾರ್ಯ, ಉಪಾಧ್ಯಕ್ಷರಾದ ದೇವರಾಜ್ ಬಿ, ಕುತ್ಯಾರು ಶಕ್ತಿ ಕೇಂದ್ರದ ಸಂಚಾಲಕರಾದ ಗಣೇಶ್ ಶೆಟ್ಟಿ ಹಾಗೂ ಕುತ್ಯಾರು ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.