Thursday, January 23, 2025
ಸುದ್ದಿ

ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ : ಸ್ಧಳದಲ್ಲಿ ಕೊನೆಯುಸಿರೆಳೆದ ಗ್ರಾಮ ಪಂಚಾಯತ್ ಸದಸ್ಯ – ಕಹಳೆ ನ್ಯೂಸ್

ಮೈಸೂರು : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ನಡೆದಿದ್ದು, ಗ್ರಾಮ ಪಂಚಾಯತ್ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನ ಜಿಲ್ಲೆಯ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ. ಮೃತ ಭಾಸ್ಕರ್ ತಮ್ಮ ಕಾರಿನಲ್ಲಿ ಕುಟುಂಬ ಸಮೇತರಾಗಿ ತಾಲೂಕಿನ ಮನುಗನಹಳ್ಳಿಯ ಮಾವನ ಮನೆಗೆ ಹೋಗಿ ವಾಪಸ್ ಬರುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಹೆದ್ದಾರಿಯ ಬನ್ನಿಕುಪ್ಪೆ ಬಳಿ ಪಿರಿಯಾಪಟ್ಟಣ ಡಿಪೋಗೆ ಸೇರಿದ ಬಸ್ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಭಾಸ್ಕರ್ ಅವರ ಪತ್ನಿ, ತಾಯಿ ಮಗನಿಗೆ ತೀವ್ರಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಅಪಘಾತದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಗ್ರಾಮಸ್ಥರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದರು. ಸ್ಥಳಕ್ಕೆ ಹುಣಸೂರು ಬಸ್ ಡಿಪೋ ಮ್ಯಾನೇಜರ್ ಸುಬ್ರಹ್ಮಣ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಪ್ರಕರಣ ಬಿಳಿಕೆರೆ ಠಾಣೆಯಲ್ಲಿ ದಾಖಲಾಗಿದೆ.