Thursday, January 23, 2025
ಸುದ್ದಿ

ಮಳೆ ಅಬ್ಬರಕ್ಕೆ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ –ಕಹಳೆ ನ್ಯೂಸ್

ಉಳ್ಳಾಲ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಸಮುದ್ರವು ಬಿರುಸುಗೊಂಡಿದ್ದು ಉಳ್ಳಾಲದ ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿದ್ದು ಕಡಲ್ಕೋರೆತ ಹೆಚ್ಚಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಉಳ್ಳಾಲದ ತೀರದ ಪ್ರದೇಶಗಳಾದ ಕೈಕೋ, ಸೀಗ್ರೌಂಡ್, ಮೊಗವೀರಪಟ್ಣ, ಸೋಮೇಶ್ವರ, ಉಚ್ಚಿಲ ಪ್ರದೇಶದಲ್ಲಿ ಸಮುದ್ರದ ಅಲೆಗಳು ದಡಕ್ಕಪ್ಪಳಿಸುತ್ತಿದೆ. ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಾತ್ಕಾಲಿಕ ಕಾಮಗಾರಿ ನಡೆಯುತ್ತಿದ್ದರೂ ಸಮುದ್ರದ ಸಮುದ್ರದ ಅಲೆಗಳು ತೀರದ ಮನೆಗಳಿಗೆ ಅಪ್ಪಳಿಸುತ್ತಿದ್ದು ತೀರದ ಪ್ರದೇಶದ ಮರ ಗಿಡಗಳು, ಅನೇಕ ಮನೆಗಳು, ರಸ್ತೆ ಸಮುದ್ರ ಪಾಲಾಗುತ್ತಿದೆ.

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಸ್ಥಳಿಯ ಶಾಸಕ, ವಿಧಾನ ಸಭಾ ಸಭಾಪತಿ ಯು ಟಿ ಖಾದರ್ ಈ ಪ್ರದೇಶಗಳಿಗೆ ಭಾನುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ್ದು ಬಟ್ಟಪ್ಪಾಡಿಯಲ್ಲಿ ಕಡಲ್ಕೊರೆತ ತಡೆಗೆ ಮುಂದಿನ ವರ್ಷದಿಂದಲೇ ಶಾಶ್ವತ ಕಾಮಗಾರಿ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ತಾತ್ಕಾಲಿಕ ಕಾಮಗಾರಿ ನಡೆಸಲಾಗುವುದು ಕಡಲ್ಕೊರೆತದಿಂದ ಮನೆ ಕಳಕೊಂಡವರಿಗೆ ಮನೆ ನಿರ್ಮಾಣಕ್ಕೆ ಪರ್ಯಾಯ ಜಾಗ ನೀಡಲು ಆದೇಶ ನೀಡುತ್ತೇನೆ ಎಂದು ಹೇಳಿದ್ದಾರೆ.