Monday, January 20, 2025
ಸುದ್ದಿ

ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಶೈಕ್ಷಣಿಕ ಸಂವಾದ ಕಾರ್ಯಕ್ರಮ ಶಿಕ್ಷಕರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತದೆ : ಎಸ್.ಎಲ್.ಭೋಜೇ ಗೌಡ – ಕಹಳೆ ನ್ಯೂಸ್

ಪುತ್ತೂರು: ನಮ್ಮ ಶಿಕ್ಷಕರು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದಾರೆ. ತಮ್ಮ ಕರ್ತವ್ಯವನ್ನು ಅತ್ಯಂತ ಒಳ್ಳೆಯ ರೀತಿಯಲ್ಲಿ ನಿರ್ವಹಿಸುತ್ತಿದ್ದಾರೆ. ಹಾಗಾಗಿ ಅವರ ಯಾವುದೇ ಸಮಸ್ಯೆಗಳಿಗೆ ಸರಕಾರ ಖಂಡಿತ ಸ್ಪಂದಿಸುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇ ಗೌಡ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಅವರು ಪುತ್ತೂರಿನ ಕ್ಷೇತ್ರ ಶಿಕ್ಷಣಾಧಿಕಾರಿಯವರ ಹಾಗೂ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಸಹಯೋಗದಲ್ಲಿ ಶನಿವಾರ ವಿದ್ಯಾಲಯದ ಆವರಣದಲ್ಲಿನ ಶ್ರೀ ಶಂಕರ ಸಭಾಭವನದಲ್ಲಿ ಆಯೋಜಿಸಲಾದ ‘ಶೈಕ್ಷಣಿಕ ಸಂವಾದ ಕಾರ್ಯಕ್ರಮ’ದಲ್ಲಿ ಭಾಗವಹಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರ ಸಮಸ್ಯೆ, ಖಾಲಿ ಹುದ್ದೆ ಭರ್ತಿ, ಕರ್ನಾಟಕ ಆರೋಗ್ಯ ಸಂಜೀವಿನಿ, ವೇತನ ಶ್ರೇಣಿ ಹೆಚ್ಚಳ, ಪಿಂಚಣಿ ಯೋಜನೆ, ಅನುದಾನಿತ ಶಾಲೆಗಳಿಗೆ ನರೇಗಾ ಯೋಜನೆ ವಿಸ್ತರಣೆ ಈ ಮುಂತಾದ ವಿಷಯಗಳ ಕುರಿತಾಗಿ ಚರ್ಚೆ ನಡೆಯಿತು.

ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸ್ವಾಗತಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಕೆ ವಂದಿಸಿದರು. ಅಂಬಿಕಾ ವಿದ್ಯಾಲಯದ ಶಿಕ್ಷಕಿಯರಾದ ಪ್ರಿಯಾಶ್ರೀ ಕೆ.ಎಸ್ ಮತ್ತು ದಿವ್ಯ ಕಾರ್ಯಕ್ರಮ ನಿರ್ವಹಿಸಿದರು. ಈ ಶೈಕ್ಷಣಿಕ ಸಂವಾದ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಶಿಕ್ಷಕರ ಸಂಘ, ಪ್ರಾಥಮಿಕ ಶಿಕ್ಷಕರ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.