Recent Posts

Monday, January 20, 2025
ಸುದ್ದಿ

ಶಾಸಕ ಅಶೋಕ್ ರೈಯವರನ್ನು ಭೇಟಿಯಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು -ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿಗೆ ಭೇಟಿ ನೀಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕರ್ನಾಟಕ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪುತ್ತೂರು ಶಾಸಕರಾದ ಅಶೋಕ್ ರೈಯವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕರು ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಕಾರ್ಯಚಟುವಟಿಕೆಯ ಬಗ್ಗೆ ಅಧ್ಯಕ್ಷರು ಶಾಸಕರಿಗೆ ವಿವರಿಸಿದರು. ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್, ಉಪಾಧ್ಯಕ್ಷರುಗಳಾದ ಅಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರು ಹಾಗೂ ದ ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು