Recent Posts

Sunday, January 19, 2025
ರಾಜಕೀಯಸುದ್ದಿ

ಮೈತ್ರಿ ಸರ್ಕಾರ ಪ್ರಜಾಪ್ರಭುತ್ವದ ಸುಧಾರಣೆಗೆ ಮಾರಕ: ಸಿ ಟಿ ರವಿ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯನ್ನ ಅಧಿಕಾರದಿಂದ ದೂರ ಇಡುವಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಾತ್ಕಾಲಿಕ ಯಶಸ್ಸು ಕಂಡಿದ್ದಾರೆ. ಆದ್ರೆ, ಬೇರೆ-ಬೇರೆ ರಾಜ್ಯಗಳಲ್ಲಿ ಬಡ್ಡಿ ಸಮೇತ ಚುಪ್ತ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಬಿಬಿಎಂಪಿ ಹಾಗೂ ಕರ್ನಾಟಕ ಸೇರಿ ಬಡ್ಡಿ ಸಮೇತ ಚುಪ್ತ ಮಾಡ್ತೇವೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಶಾಸಕ ಸಿ.ಟಿ ರವಿ ಕಿಡಿ ಕಾರಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವ್ರು, ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆದ್ದಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಮೈತ್ರಿ ಪ್ರಜಾಪ್ರಭುತ್ವದ ಅಪಹಾಸ್ಯ, ಪರಸ್ಪರ ವಿರುದ್ಧ ನಿಂತು ಚುನಾವಣೆ ಮಾಡಿ ಈಗ ಅಧಿಕಾರಕ್ಕಾಗಿ ಒಂದಾಗಿದ್ದಾರೆಂದು ಮೈತ್ರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಜನಮತಕ್ಕೆ ವಿರೋಧವಾಗಿದ್ದು, ಪ್ರಜಾಪ್ರಭುತ್ವದ ಸುಧಾರಣೆಗೆ ಇಂತಹಾ ಘಟನೆಗಳು ಮಾರಕವಾಗಿದ್ದು, ಚುನಾವಣಾ ಆಯೋಗ ಪ್ರಜಾಪ್ರಭುತ್ವದ ಸುಧಾರಣೆಗೆ ಮುಂದಾಗಬೇಕು ಎಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು