Recent Posts

Tuesday, November 26, 2024
ಸುದ್ದಿ

ಇನ್ನರ್‌ವೀಲ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿ ಶ್ರೀದೇವಿ ರೈ, ಕೋಶಾಧಿಕಾರಿ ಸೀಮಾ ನಾಗರಾಜ್ –ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಇನ್ನರ್‌ವೀಲ್ ಕ್ಲಬ್‌ನ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು, ಅಧ್ಯಕ್ಷೆಯಾಗಿ ಅಶ್ವಿನಿಕೃಷ್ಣ ಮುಳಿಯ, ಕಾರ್ಯದರ್ಶಿಯಾಗಿ ಶ್ರೀದೇವಿ ರೈ, ಕೋಶಾಧಿಕಾರಿಯಾಗಿ ಸೀಮಾ ನಾಗರಾಜ್ ಅವರು ಆಯ್ಕೆಗೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೂನ್ 15ರಂದು ಬೆಳಗ್ಗೆ ರೋಟರಿ ಮನೀಷಾ ಹಾಲ್‌ನಲ್ಲಿ ನಡೆಯಲಿದ್ದು, ಪದಗ್ರಹಣವನ್ನು ಜಿಲ್ಲಾ ISಔ ರಜನಿ ಭಟ್ ಇವರು ನಡೆಸಿ ಕೊಡಲಿದ್ದಾರೆ.

ಕ್ಲಬ್‌ನ ಸಂಪಾದಕಿಯಾಗಿ ಸುಧಾ ಕಾರ್ಯಪ್ಪ, ISO ಆಗಿ ಆಶಾ ನಾಯಕ್, ವೆಬ್ ಕೋ-ಆರ್ಡಿನೇಟರ್ ಆಗಿ ಶ್ರೀಮತಿ ವಚನಾ ಜಯರಾಮ್ ಇವರು ಆಯ್ಕೆಯಾಗಿದ್ದು, ನಿಕಟಪೂರ್ವ ಅಧ್ಯಕ್ಷೆಯಾಗಿ ಟೈನಿ ದೀಪಕ್, ಉಪಾಧ್ಯಕ್ಷೆಯಾಗಿ ರಾಜೇಶ್ವರಿ ಆಚಾರ್ ಹಾಗೂ ನಿರ್ದೇಶಕರುಗಳಾಗಿ ರಾಜೇಶ್ವರಿ ಬಲರಾಮ್, ರಮಾ ಪ್ರಭಾಕರ್, ಪುಷ್ಪಾ ಕೆದಿಲಾಯ, ವೈ. ವಿಜಯಲಕ್ಷ್ಮಿ ಹಾಗೂ ವೀಣಾ ಬಿ.ಕೆ ಇವರು ಆಯ್ಕೆಯಾಗಿದ್ದಾರೆ.

ಇನ್ನೂ “ಶೈನ್ ಎ ಲೈಟ್” ಎನ್ನುವುದು ಇನ್ನರ್‌ವೀಲ್ ಕ್ಲಬ್‌ನ ಈ ವರ್ಷದ ಧ್ಯೇಯ ವಾಕ್ಯವಾಗಿದ್ದು, ಆರೋಗ್ಯ, ಸ್ವಚ್ಛತೆ, ಕಡಿಮೆ ಪೇಪರ್ ಬಳಕೆ, ಮಹಿಳಾ ಸಬಲೀಕರಣ, ಪರಿಸರ ಕಾಳಜಿ, ಬಡ ಮಕ್ಕಳ ವಿಧ್ಯಾಭ್ಯಾಸಕ್ಕೆ ನೆರವು ಹೀಗೆ ಹಲವಾರು ಯೋಜನೆಗಳು ಈ ಧ್ಯೇಯ ವಾಕ್ಯದಡಿ ಬರುತ್ತದೆ. ಕ್ಲಬ್‌ನ ಎಲ್ಲಾ ಸದಸ್ಯರುಗಳು ಇದಕ್ಕೆ ಪೂರಕವಾದ ಚಟುವಟಿಕೆಗಳನ್ನು ಮಾಡಲಿದ್ದಾರೆ ಎಂದು ನಿಯೋಜಿತ ಅಧ್ಯಕ್ಷೆ ಅಶ್ವಿನಿಕೃಷ್ಣ ಮುಳಿಯ ಇವರು ತಿಳಿಸಿದ್ದಾರೆ.