Sunday, November 24, 2024
ಬೆಂಗಳೂರುರಾಜಕೀಯರಾಜ್ಯಸುದ್ದಿ

ಅಪಾಯಿಂಟ್‌ಮೆಂಟ್‌ ಪ್ಲೀಸ್ : ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ಭೇಟಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸಮಯಾವಕಾಶ ಕೇಳಿದ್ದಾರೆ. ಜೂನ್ 21ರಂದು ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಜೂನ್ 21ರಂದು ದೆಹಲಿಗೆ ತೆರಳಲಿರುವ ಸಿಎಂ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರನ್ನು ಭೇಟಿಯಾಗಲು ಸಿಎಂ ನಿರ್ಧರಿಸಿದ್ದಾರೆ. ಪ್ರಧಾನಿಗಳ ಭೇಟಿಗೆ ಅವಕಾಶ ಸಿಕ್ಕರೆ, ಅನ್ನಭಾಗ್ಯ ಅಕ್ಕಿ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಗಳಿವೆ.

ಅನ್ನ ಭಾಗ್ಯ ಯೋಜನೆಗೆ ಕೇಂದ್ರ ಅಡ್ಡಿ; ಸಿಎಂ ಆರೋಪ

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಕೊಕ್ಕೆ ಹಾಕಿದೆಯಾ ಎಂಬ ಪ್ರಶ್ನೆ ಇದೀಗ ಎದ್ದಿದೆ. ಅಕ್ಕಿ ಕೊಡೋದ್ರಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಎಷ್ಟೇ ಕಷ್ಟ ಆದರೂ ಅಕ್ಕಿ ಕೊಟ್ಟೇ ಕೊಡುತ್ತೇವೆ, ಏನೇ ಷಡ್ಯಂತ್ರ ಮಾಡಿದರೂ ಪ್ಲಾನ್‌-ಬಿ ಇದೆ ಎಂದಿದ್ದಾರೆ. ಕೇಂದ್ರದವರು ಬಡವರ ವಿರೋಧಿಗಳು , ಅಕ್ಕಿ ಇಟ್ಟುಕೊಂಡು ಕೊಡಲ್ಲ ಅಂತ ಹೇಳುತ್ತಿದ್ದಾರೆ, ಕೇಂದ್ರದವರೇನು ಉಚಿತವಾಗಿ ಅಕ್ಕಿ ನೀಡುತ್ತಿಲ್ಲ.

ನಾವು ಹಣ ನೀಡಿ ಅಕ್ಕಿ ಪಡೆಯುತ್ತಿದ್ದೇವೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದು ಅನ್ನಭಾಗ್ಯ ಯೋಜನೆಯನ್ನು ಹಿನ್ನಡೆಯಾಗಿಸುವ ಹುನ್ನಾರ ಎಂಬುದು ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ,

ಕಾಂಗ್ರೆಸ್ ಆಕ್ರೋಶ :

ಕೇಂದ್ರ ಸರ್ಕಾರ ಸ್ಪಷ್ಟವಾಗಿ ಆಹಾರ ಹಕ್ಕು ಕಾಯ್ದೆಯನ್ನು ಉಲ್ಲಂಘಿಸುತ್ತಿದೆ. ಏಳು ಲಕ್ಷ ಟನ್ ಅಕ್ಕಿ ಸಂಗ್ರಹವಿದ್ದರೂ ರಾಜ್ಯಗಳಿಗೆ FCI ಅಕ್ಕಿ ಮಾರಾಟ ಮಾಡುವುದನ್ನು ನಿರಾಕರಿಸುವ ಮೂಲಕ ಕನ್ನಡಿಗರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ ಮೋದಿ.

ಖಾಸಗಿಯವರಿಗೆ ಮಾರಾಟ ಮಾಡುವ ಅವಕಾಶವಿರುವಾಗ ರಾಜ್ಯ ಸರ್ಕಾರಕ್ಕೆ ಏಕೆ ಈ ನಿರಾಕರಣೆ. ಇದು ದುರುದ್ದೇಶವಲ್ಲದೆ ಇನ್ನೇನು ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.