Thursday, January 23, 2025
ಸುದ್ದಿ

ಕೋಚಿಂಗ್ ಸೆಂಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ : ಹಗ್ಗದ ಸಹಾಯದಿಂದ ಕಿಟಕಿಯಿಂದ ಹಾರಿದ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಕೋಚಿಂಗ್ ಸೆಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಜೀವ ಉಳಿಸಿಕೊಳ್ಳಲು ಹರಸಾಹಸ ಪಟ್ಟು ಹಗ್ಗದ ಸಹಾಯದಿಂದ ಕೆಳಕ್ಕೆ ಇಳಿದು ಜೀವ ಉಳಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ದೆಹಲಿಯ ಮುಖರ್ಜಿ ನಗರದಲ್ಲಿರುವ ಕೋಚಿಂಗ್ ಸೆಂಟರ್‌ವೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಭಯ ಬೀತರಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಗಳು 4ನೇ ಮಹಡಿಯಿ ಕಿಟಕಿಯಿಂದಲೇ ಪಾರಾಗಿ ಕೆಳಕ್ಕೆ ಇಳಿದಿದ್ದಾರೆ.
ಇನ್ನು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಅಗ್ನಿಶಾಮಕ ಸಿಬ್ಬಂದಿ ಕಾಪಾಡಿದ್ದಾರೆ. ಅಲ್ಲದೇ ಇದಕ್ಕೂ ಮೊದಲು ವಿದ್ಯಾರ್ಥಿ, ವಿದ್ಯಾರ್ಥಿನಿಯರು 4ನೇ ಮಹಡಿಯಿಂದಲೇ ಹಗ್ಗದ ಸಹಾಯದಿಂದ ಕೇಳಕ್ಕೆ ಇಳಿದು ಜೀವ ಉಳಿಸಿಕೊಂಡಿದ್ದಾರೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಹೇಳಲಾಗಿದೆ. ಇನ್ನು ಸ್ಥಳಕ್ಕೆ ಪೊಲೀಸರು ಕೂಡ ಭೇಟಿ ನೀಡಿ ರಕ್ಷಣೆಯಲ್ಲಿ ತೊಡಗಿದ್ದಾರೆ.