Tuesday, January 28, 2025
ಸುದ್ದಿ

ಅಕ್ರಮ ಗೋ ಸಾಗಾಟ-ಬಜರಂಗದಳ ಕಾರ್ಯಕರ್ತರು, ಪೊಲೀಸರಿಂದ ಗೋವುಗಳ ರಕ್ಷಣೆ – ಕಹಳೆ ನ್ಯೂಸ್

ಮೂಡುಬಿದಿರೆ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ಇಂದು ಮುಂಜಾನೆ ರಕ್ಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ,ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಾಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಗೋಕಳ್ಳರು ಕಾರನ್ನು ಮತ್ತು ಮೊಬೈಲ್ ಗಳನ್ನು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸ್ ಉಪ ನಿರೀಕ್ಷಕ ಸಿದ್ದಪ್ಪ, ಬಜರಂಗದಳದ ತಾಲೂಕು ಸಂಚಾಲಕ ಅಭಿಲಾಶ್ ಸಹಿತ ಕಾರ್ಯಕರ್ತರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.