ಪುತ್ತೂರು : ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಲ್ಲರ್ಪೆ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ಇಸ್ಮಾಯಿಲ್ ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಕೊನೆಯುಸಿರೆಳೆದಿದ್ದಾರೆನ್ನಲಾಗಿದೆ. ಅಪಘಾತದ ರಭಸಕ್ಕೆ ದ್ವಿಚಕ್ರ ವಾಹನ ನಜ್ಜುಗುಜ್ಜಾಗಿದೆ.
ಮೃತ ಇಸ್ಮಾಯಿಲ್ ಪತ್ನಿ, ಮೂರು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ಸಂಪ್ಯ ಪೊಲೀಸರು ದೂರು ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.