Monday, January 20, 2025
ಸುದ್ದಿ

‘ಪರಿಸರ ಉಳಿಸದಿದ್ದರೆ ನಮ್ಮ ಜೀವನ ಸರ್ವನಾಶ’; ಶ್ರೀ ಕ್ಷೇ.ಧ. ಗ್ರಾ. ಯೋಜನಾಧಿಕಾರಿ ಚೆನ್ನಪ್ಪ ಗೌಡ –ಕಹಳೆ ನ್ಯೂಸ್

ಪರಿಸರ ಉಳಿಸದಿದ್ದರೆ ನಮ್ಮ ಜೀವನ ಸರ್ವನಾಶ ಆಗುವುದರಲ್ಲಿ ಸಂಶಯವಿಲ್ಲ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾsಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಕೆಲಿಂಜ ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಕೆಲಿಂಜ ಒಕ್ಕೂಟದ ಹಾಗೂ ಕಲ್ಲಡ್ಕ ವಲಯ ಶೌರ್ಯ ವಿಪತ್ತು ತಂಡದ ಜಂಟಿ ಆಶ್ರಯದಲ್ಲಿ ನಡೆದ ಪರಿಸರ ಜಾಗೃತಿ ಮಾಹಿತಿ ಶಿಬಿರ ನಡೆದಿದೆ.

ಸಭೆಯನ್ನು ಉದ್ದೇಶಿಸಿ ಮಾತಾನಾಡಿದ ಅವರು ಪರಿಸರ ನಾಶದಿಂದ ಈಗಾಗಲೇ ನಾವು ಹಲವಾರು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ ಇನ್ನಾದರೂ ಪರಿಸರವನ್ನು ಉಳಿಸುವಲ್ಲಿ ಎಲ್ಲರೂ ಕೈಜೋಡಿಸಬೇಕಾಗಿ ವಿನಂತಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ ವಹಿಸಿದ್ದು, ವೀರಕಂಬ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಯೋಜನೆಯ ಕೃಷಿ ಅಧಿಕಾರಿ ಚಿದಾನಂದ ಪರಿಸರ ಸಂರಕ್ಷಣೆ ಬಗ್ಗೆ ಮಾಹಿತಿ ನೀಡಿದ್ರು.
ಮುಖ್ಯ ಅತಿಥಿಗಳಾಗಿ ಕೆಲಿಂಜ ಶಾಲಾ ಹಿರಿಯ ವಿದ್ಯಾರ್ಥಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಲಯನ್ ಸಂತೋಷ್ ಶೆಟ್ಟಿ ಪೆಲತಡ್ಕ ಮಾತಾನಾಡಿ, ಮುಚ್ಚುವ ಹಂತದಲ್ಲಿ ಇದ್ದ ಶಾಲೆಯಲ್ಲಿ ಊರಿನವರ ಎಲ್ಲಾ ಸಹಕಾರ ಪಡೆದು ಒಂದೇ ವರ್ಷದ ಅವಧಿಯಲ್ಲಿ ಸುಮಾರು 75 ಮಕ್ಕಳು ಕಲಿವಂತೆ ಆದ ಈ ಶಾಲೆಯನ್ನು ಇಂತಹ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಂಡದ್ದಕ್ಕಾಗಿ ಯೋಜನೆಯ ಸಂಬಂಧಪಟ್ಟ ಎಲ್ಲರಿಗೂ ಅಭಿನಂದಿಸಿ ಶಾಲೆಯ ಪ್ರಗತಿಗೆ ಯೋಜನೆಯ ಪೂರ್ಣ ಸಹಕಾರವನ್ನು ಯಾಚಿಸಿದರು.

ಈ ಸಂದರ್ಭದಲ್ಲಿ ಶಾಲಾ ಸುತ್ತಮುತ್ತ ಹಣ್ಣಿನ ಗಿಡಗಳನ್ನು ನೆಟ್ಟು, ಬಳಿಕ ಯೋಜನೆ ಹಾಗೂ ಶೌರ್ಯ ತಂಡದ ಸದಸ್ಯರಿಂದ ಶಾಲಾ ಆವರಣ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಪರಿಸರಕ್ಕೆ ಸಂಬAಧಿಸಿದAತೆ ವಿವಿಧ ಸ್ಪರ್ಧೆಗಳನ್ನು ಮಾಡಿ ವಿಜೇತರಿಗೆ ಬಹುಮಾನ ನೀಡಿದ್ದು, ಯೋಜನೆಯ ವತಿಯಿಂದ ಶಾಲಾ ಎಲ್ಲಾ ಮಕ್ಕಳಿಗೆ ಉಚಿತವಾಗಿ ಮಗ್ಗಿ ಪುಸ್ತಕವನ್ನು ವಿತರಿಸಿದ್ದಾರೆ.
ಪ್ರತಿ ಮಕ್ಕಳಿಗೆ ಒಂದು ಒಂದು ಗಿಡವನ್ನು ನೀಡಿ ತಮ್ಮ ತಮ್ಮ ಮನೆಯಲ್ಲಿ ಸಸಿಯನ್ನು ತಮ್ಮ ಪೋಷಕರ ಸಹಕಾರದೊಂದಿಗೆ ನಾಟಿ ಮಾಡುವಂತೆ ತಿಳಿಸಿ ಉತ್ತಮ ರೀತಿಯಲ್ಲಿ ಸಸ್ಯವನ್ನು ಪೋಷಿಸಿ ಮಕ್ಕಳಿಗೇ ಬರುವ ವಿಶ್ವ ಪರಿಸರ ದಿನದಂದು ಬಹುಮಾನ ನೀಡುವ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜಯಂತಿ, ವೀರಕಂಬ ಗ್ರಾಮ ಪಂಚಾಯತ್ ಸದಸ್ಯರಾದ ಸಂದೀಪ್, ಜಯಪ್ರಸಾದ್, ಯೋಜನೆಯ ಶೌರ್ಯ ವಿಪತ್ತು ತಂಡದ ಕಲ್ಲಡ್ಕ ವಲಯ ಅಧ್ಯಕ್ಷ ಮಾಧವ ಸಾಲಿಯನ್, ಕೆಲಿಂಜ ಒಕ್ಕೂಟ ಅಧ್ಯಕ್ಷ ದಯಾನಂದ್ ಮೊದಲಾದವರು ಉಪಸ್ಥಿತರಿದ್ದರು,
ಶಾಲಾ ಮಕ್ಕಳು ಪ್ರಾರ್ಥಿಸಿ, ಮುಖ್ಯ ಶಿಕ್ಷಕ ತಿಮ್ಮಪ್ಪ ನಾಯ್ಕ ಸ್ವಾಗತಿಸಿ, ಯೋಜನೆ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ ಕಾರ್ಯಕ್ರಮದ ಪ್ರಸ್ತಾವಿಕ ಭಾಷಣ ಮಾಡಿದ್ರು. ಶಾಲಾ ಶಿಕ್ಷಕಿ ಉಷಾ ಸುವರ್ಣ ಬಹುಮಾನ ಪಟ್ಟಿ ವಾಚಿಸಿದ್ದು, ಶಿಕ್ಷಕಿ ಮಂಜುಳಾ ಧನ್ಯವಾದ ಸಮರ್ಪಿಸಿದ್ದಾರೆ. ಕೆಲಿಂಜ ಒಕ್ಕೂಟ ಸೇವಾ ಪ್ರತಿನಿಧಿ ರೇಣುಕಾ ಕಾರ್ಯಕ್ರಮ ನಿರೂಪಿಸಿದ್ದಾರೆ. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ಮಕ್ಕಳ ಪೋಷಕರು, ಯೋಜನೆಯ ಒಕ್ಕೂಟ ಸದಸ್ಯರುಗಳು, ಶೌರ್ಯ ವಿಪತ್ತು ತಂಡದ ಸದಸ್ಯರುಗಳು ಉಪಸ್ಥಿತರಿದ್ದರು.