ಉಡುಪಿ : ಕ್ಷೇತ್ರದ ಗ್ರಾಮೀಣ ಹಾಗೂ ನಗರ ಭಾಗದ ಜನಸಾಮಾನ್ಯರಿಗೆ ಸರಕಾರದ ಜಿಲ್ಲಾ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಜನಸ್ನೇಹಿ ವೈದ್ಯಕೀಯ ಸೇವೆಗೆ ಆದ್ಯತೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.
ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನಾಗಭೂಷಣ ಉಡುಪ, ಉಡುಪಿ ಜಿಲ್ಲಾ ಸರ್ಜನ್ ಡಾ. ಸುಧೇಶ್ ಉಪಸ್ಥಿತಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಖಾಸಗಿ ಸಂಸ್ಥೆಯ ಅಸಮರ್ಪಕ ನಿರ್ವಹಣೆಯಿಂದ ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿರುವ ಬಗ್ಗೆ ಮಾಹಿತಿ ಪಡೆದು ಸರ್ಕಾರಕ್ಕೆ ಈ ಬಗ್ಗೆ ವರದಿ ಮಾಡುವಂತೆ ಹೇಳಿದರು.
ಬ್ರಹ್ಮಾವರ ತಾಲೂಕಿನಲ್ಲಿ ನೂತನ ತಾಲೂಕು ಆಸ್ಪತ್ರೆಗೆ ಸೂಕ್ತ ಸರಕಾರಿ ನಿವೇಶನ ಗುರುತಿಸುವಂತೆ ಕಂದಾಯ ಇಲಾಖೆಯ ಮೂಲಕ ಪ್ರಸ್ತಾವನೆ ಸಲ್ಲಿಕೆ, ಮಳೆಗಾಲದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಸೂಕ್ತ ಮುಂಜಾಗ್ರತ ಕ್ರಮ, ಉಡುಪಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ನಿರ್ವಹಣೆಯ ಪ್ರಸ್ತುತ ಸಮಸ್ಯೆಗಳ ಪರಿಹಾರಕ್ಕೆ ಸರಕಾರಕ್ಕೆ ಮನವಿ, ಖಾಲಿ ಇರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ಮತ್ತು ಆಶಾ ಕಾರ್ಯಕರ್ತರ ನೇಮಕಾತಿಗೆ ಸೂಕ್ತ ಕ್ರಮ, 108 ಆಂಬುಲೆನ್ಸ್ ಸೇವೆ, ಖಾಸಗಿ ಆಸ್ಪತ್ರೆಗಳ ತಜ್ಞ ವೈದ್ಯರ ಸಂಯೋಜನೆಯೊAದಿಗೆ ಜಿಲ್ಲಾಸ್ಪತ್ರೆಯ ಆರೋಗ್ಯ ಸೇವೆಯನ್ನು ಪರಿಣಾಮಕಾರಿಯಾಗಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚಿಸಲಾಯಿತು.