Recent Posts

Sunday, January 19, 2025
ಸಂತಾಪಸುದ್ದಿ

ಭಾರತೀಯ ವಾಯುಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದ ಹೆಚ್. ನಾರಾಯಣ ಕಾಮತ್ ಇನ್ನಿಲ್ಲ – ಕಹಳೆ ನ್ಯೂಸ್

ಅಲ್ಪ ಕಾಲದ ಅಸೌಖ್ಯದಿಂದ ಎಚ್ ನಾರಾಯಣ ಕಾಮತ್ ಜೂ.19ರ ರಾತ್ರಿ 11 ಗಂಟೆಗೆ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಇವರು ಭಾರತೀಯ ವಾಯುಸೇನೆಯಲ್ಲಿ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. ಪತಂಜಲಿ ಯೋಗಸಮಿತಿ ಸಕ್ರಿಯ ಸದಸ್ಯರಾಗಿ ಹಲವಾರು ಯೋಗ ತರಭೇತಿ ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪಟ್ಲ ರೂರಲ್ ಎಜುಕೇಷನ್ ಸೊಸೈಟಿಯ ಆಡಳಿತ ಮಂಡಳಿಯ ಕಾರ್ಯದರ್ಶಿಯಾಗಿ, ಪ್ರಸ್ತುತ ಆಡಳಿತ ಮಂಡಳಿಯ ಸದಸ್ಯರಾಗಿದ್ದು ಶಾಲೆಗೆ ಉತ್ತಮ ಆಧಾರರಾಗಿ ಕೆಲಸ ಮಾಡುತ್ತಿದ್ದು, ಹಲವಾರು ಸಂಘ ಸಂಸ್ಥೆಗಳೊಡನೆ ಒಡನಾಟ ಹೊಂದಿ ಸಕ್ರಿಯರಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮೃತರ ಅಂತಿಮ ದರ್ಶನ ಬೆಳಿಗ್ಗೆ 10 ಗಂಟೆಗೆ ಅವರ ಆಲಂಬಿ ನಿವಾಸದಲ್ಲಿ, ನಂತರ ಧಾರ್ಮಿಕ ವಿಧಿವಿಧಾನ ಪ್ರಕ್ರಿಯೆ ನಡೆದು ಆಂತ್ಯ ಸಂಸ್ಕಾರ ನಡೆಯಲಿದೆ.