ಬೆಂಗಳೂರು : ಉಚಿತ 10 ಕೆಜಿ ಅಕ್ಕಿ ನಿರೀಕ್ಷೆಯಲ್ಲಿದ್ದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್, ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಜುಲೈನಲ್ಲಿ ಜಾರಿಯಾಗುವುದು ಅನುಮಾನ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಉಚಿತ ಅಕ್ಕಿ ಕೊಡುವುದು ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.
10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ ಆದರೆ ಸ್ವಲ್ಪ ತಡವಾಗಬಹುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಆಹಾರ ನಿಗಮ ನಿರಾಕರಿಸಿದ್ದರೂ ಕೂಡ ನಮ್ಮ ಆಹಾರ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರು ಕೇಂದ್ರ ಆಹಾರ ಸರಬರಾಜು ಸಚಿವರನ್ನು ಭೇಠಿಯಾಗಿ ಅಕ್ಕಿ ಖರೀದಿಗೆ ಅನುಮತಿ ನೀಡುವಂತೆ ಮನವಿ ಮಾಡಲಿದ್ದಾರೆ. ಹೇಗಾದರೂ ಮಾಡಿ ನಾವು ಅಕ್ಕಿ ಖರೀದಿಸಿ ಅನ್ನಭಾಗ್ಯದಡಿ 10 ಕೆಜಿ ಅಕ್ಕಿಯನ್ನು ಕೊಟ್ಟೇ ಕೊಡುತ್ತೇವೆ, ಆದರೆ ಸ್ವಲ್ಪ ತಡವಾಗಬಹುದು ಎಂದು ಹೇಳಿದ್ದಾರೆ.