Thursday, January 23, 2025
ಸುದ್ದಿ

ಬಿಜೆಪಿ ಬಂಟ್ವಾಳ ಮಂಡಲದಿಂದ ಬಿ.ಸಿ.ರೋಡಿನ ರಂಗೋಲಿ ಸಭಾ ಭವನದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಇಂದು ಬಿಜೆಪಿ ಬಂಟ್ವಾಳ ಮಂಡಲದಿಂದ ಬಿ.ಸಿ.ರೋಡಿನ ರಂಗೋಲಿ ಸಭಾ ಭವನದಲ್ಲಿ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು. ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದ ಬಂಟ್ವಾಳದ ಜನಪ್ರಿಯ ಶಾಸಕರಾದ ರಾಜೇಶ್ ನಾಯ್ಕ್ ” ಜೂನ್ 21 ರಂದು ಕಾಲಮಾನದಲ್ಲಿ ರಾತ್ರಿಗಿಂತ ಹಗಲು ದೊಡ್ಡದು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅಂದೇ ವಿಶ್ವ ಯೋಗ ದಿನಾಚರಣೆ ನಡೆಯುತ್ತಿರುವುದು ವಿಶೇಷ. ಮನುಷ್ಯನ ದೇಹದ ಆರೋಗ್ಯ ಮತ್ತು ಮನಸ್ಸಿನ ಆರೋಗ್ಯಕ್ಕೆ ಯೋಗ ಪೂರಕ. ವಿಶ್ವ ಮಾನ್ಯ ನಾಯಕ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು 2015ರಲ್ಲಿ ವಿಶ್ವಸಂಸ್ಥೆಯಲ್ಲಿ ವಿಶ್ವಯೋಗ ದಿನಾಚರಣೆಗೆ ಕರೆಕೊಟ್ಟ ಬಳಿಕ ಪ್ರಪಂಚದ ನಾನಾ ದೇಶಗಳು ಈ ಯೋಗದ ಮಹತ್ವವನ್ನು ಅರಿತುಕೊಂಡು ಇಂದು 186 ದೇಶಗಳಲ್ಲಿ ವಿಶ್ವ ಯೋಗ ದಿನದ ಕಾರ್ಯಕ್ರಮ ನಡೆಯುತ್ತಿದೆ ” ಎಂದು ಹೇಳಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ್, ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ರಾಜ್ಯ ಬಿಜೆಪಿ ನಾಯಕಿ ಸುಲೋಚನಾ ಜಿ.ಕೆ.ಭಟ್, ಬಂಟ್ವಾಳ ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ, ಮಂಡಲ ಪದಾಧಿಕಾರಿಗಳು, ಬಿಜೆಪಿ ಪ್ರಮುಖರು, ಕಾರ್ಯಕರ್ತರು ಭಾಗವಹಿಸಿ, ಯೋಗಾಭ್ಯಾಸ ಮಾಡಿದರು. ಈ ಕಾರ್ಯಕ್ರಮದಲ್ಲಿ ಶ್ರೀ ಸುಬ್ರಹ್ಮಣ್ಯ ಭಟ್ ನೇತೃತ್ವದ ಪತಂಜಲಿ ಯೋಗ ತಂಡದವರು ಯೋಗ ಶಿಕ್ಷಣ ನೀಡಿದರು.