Thursday, January 23, 2025
ಉಡುಪಿಜಿಲ್ಲೆ

ಉಡುಪಿ ಜಿಲ್ಲಾ ಬಿಜೆಪಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ – ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21ರಂದು ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ. ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಯೋಗ ಶಿಕ್ಷಕಿಯರಾದ ಶೋಭಾ ಶೆಟ್ಟಿ ಇಂದ್ರಾಳಿ, ಚೆನ್ನಮ್ಮ ಉಡುಪ, ಯೋಗ ವಿದ್ಯಾರ್ಥಿ ಸ್ವಾತಿ ಭಟ್ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು.