Wednesday, January 22, 2025
ಸುದ್ದಿ

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ – ಕಹಳೆ ನ್ಯೂಸ್

ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪ್ಪಿನಂಗಡಿ ಇಲ್ಲಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಕಾಲೇಜಿನ ಹಳೆ ವಿದ್ಯಾರ್ಥಿನಿ ಯೋಗ ಪಟು ಇಂದ್ರಪ್ರಸ್ಥ ಶಿಕ್ಷಣ ಸಂಸ್ಥೆಯ ಯೋಗ ಶಿಕ್ಷಕಿ ಶ್ರೀಮತಿ ಕೆ ವಿದ್ಯಾ ರವರು ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಪ್ರಾಂಶುಪಾಲರಾದ ಪ್ರೊ ಸುಬ್ಬಪ್ಪ ಕೈಕಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ್ ಕುಮಾರ್ ಸ್ವಾಗತಿಸಿ ಉಪನ್ಯಾಸಕಿ ಡಾ ಬಸವರಾಜೇಶ್ವರಿ ದಿಡ್ಡಿಮನಿ ವಂದಿಸಿದರು. ಕುಮಾರಿ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.