Monday, November 25, 2024
ಸುದ್ದಿ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ – ಕಹಳೆ ನ್ಯೂಸ್

ಮಾಣಿ : ಜೀವ-ದೇವನ ಸಂಬoಧ ಯೋಗದಲ್ಲಿದೆ. ಬದುಕನ್ನು ಹೇಗೆ ರೂಪಿಸಬೇಕು ಎನ್ನುವುದನ್ನು ನಾವು ತಿಳಿದುಕೊಳ್ಳುವುದು ಅಗತ್ಯವಿದೆ. ಶಿಸ್ತು ಸ್ವಚ್ಛತೆ ಇದ್ದಲ್ಲಿ ಸದಾಚಾರ ಸಂಪನ್ನತೆಯಾಗುತ್ತದೆ. ಮನಸ್ಸಿನ ಸ್ವಾಸ್ಥ್ಯಕ್ಕೆ ಯೋಗ ಅಗತ್ಯ. ಬಾಲವಿಕಾಸ ವಿದ್ಯಾಸಂಸ್ಥೆ ವ್ಯಕ್ತಿ ವಿಕಾಸದ ಜೊತೆಗೆ ರಾಷ್ಟ್ರ ವಿಕಾಸಕ್ಕೆ ನಾಂದಿಯಾಗಲಿದೆ. ಸತ್ಪ್ರಜೆ ಎನ್ನುವ ನಾಣ್ಯ ಚಲಾವಣೆ ಯಾಗಲು ಪೋಷಕರು ಹಾಗೂ ಶಿಕ್ಷಕರು ಜೊತೆಗಿರಬೇಕು ಎಂದು ಒಡಿಯೂರು ಶ್ರೀಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ನಿನ್ನೆ ಮಾಣಿ ಪೆರಾಜೆಯ ವಿದ್ಯಾನಗರದಲ್ಲಿರುವ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಶಾಲೆಯ ದಿ| ಪಾಳ್ಯ ಅನಂತರಾಮ ರೈ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಈಗಿನ ಕಾಲಘಟ್ಟಕ್ಕೆ ತಕ್ಕುದಾದ ಒಂದು ಸುಸಜ್ಜಿತವಾದ ವ್ಯವಸ್ಥೆ ಈ ಶಿಕ್ಷಣ ಸಂಸ್ಥೆಯಲ್ಲಿರುವುದು ಸಂತಸತoದಿದೆ. ಪ್ರಹ್ಲಾದರಿಗೆ ರಾಷ್ಟ್ರೀಯ ಪ್ರಜ್ಞೆ ಹುಟ್ಟಿದ್ದರಿಂದ ಈ ಸಂಸ್ಥೆಯ ಉಗಮವಾಗಿದೆ. ಬಾಲವಿಕಾಸ ಶಿಕ್ಷಣ ಸಂಸ್ಥೆ ಇತರರಿಗೆ ಮಾದರಿಯಾಗಿದೆ. ನಾನು ಎಂಬುದನ್ನು ಬಿಟ್ಟು ನಮ್ಮದು ಎನ್ನುವುದು ನಮ್ಮಲ್ಲಿ ಬರಬೇಕು. ನಮ್ಮ ಮನಸ್ಸಿನಲ್ಲಿ ಶಾಂತಿ ಕಾಪಾಡುವ ಕೆಲಸವಾಗಬೇಕು. ಸಂಸ್ಥೆಯಿoದ ಮಕ್ಕಳನ್ನು ಭಾರತ ರಥದ ಸಾರಥಿಯನ್ನಾಗಿ ಮಾಡುವ ಕೆಲಸವಾಗಲಿ. ಮಕ್ಕಳಲ್ಲಿ ಸಂಸ್ಕೃತಿಯ ಬೀಜ ಬಿತ್ತಬೇಕು. ಆಗ ಸದೃಢ ಸಮಾಜ ನಿರ್ಮಾಣವಾಗಲು ಸಾಧ್ಯ. ಸರಿಯಾದ ಆಲೋಚನೆ ಇದ್ದರೆ ರಾಷ್ಟ್ರ ನಿರ್ಮಾಣ ಸಾಧ್ಯ.

ಆದರ್ಶ ರಾಷ್ಟ್ರ ನಿರ್ಮಾಣದಲ್ಲಿ ನಮ್ಮ ಪಾತ್ರವೇನು ಎನ್ನುವುದನ್ನು ಅರಿಯುವ ಕೆಲಸವಾಗಬೇಕು. ಮನುಷ್ಯನ ಮನಸ್ಸಿನಲ್ಲಿ ಸ್ವಚ್ಛತೆಯ ಅಗತ್ಯವಿದೆ. ವಿಕಾಸ ಎನ್ನುವುದು ಅದ್ಭುತ ಶಬ್ದ. ಸಂಸ್ಥೆ ಇನ್ನಷ್ಟು ವಿಕಾಸಗೊಳ್ಳಲಿ ಎಂದರು.

ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರಾದ ಪ್ರಹ್ಲಾದ್ ಜೆ. ಶೆಟ್ಟಿ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಗುರುವಿನ ಸಂದೇಶದಿAದ ವಿದ್ಯಾರ್ಥಿಗಳ ಬಾಳು ಬೆಳಗಲಿ. ಶಿಸ್ತು- ಸಂಯಮ ಇದ್ದಲ್ಲಿ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ವ್ಯಕ್ತಿ ಯಾಗಲು ಸಾಧ್ಯ. ಸಂಸ್ಥೆ ವಿದ್ಯಾರ್ಥಿಗಳ ಜೀವನಕ್ಕೆ ದಾರಿ ದೀಪವಾಗಲಿ. ವಿದ್ಯಾರ್ಥಿಗಳ ಕನಸು ನನಸಾಗುವ ದಿನ ಈ ಯೋಗ ದಿನವಾಗಲಿ ಎಂದರು.

ಯೋಗ ಶಿಕ್ಷಕರಾದ ವಿಜೇಶ್ ಯವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಯೋಗಾಸನಗಳನ್ನು ಪ್ರದರ್ಶಿಸಿದರು .
ಟ್ರಸ್ಟ್ ನ ಉಪಾಧ್ಯಕ್ಷರಾದ ಯತಿರಾಜ್ ಎನ್, ಕಾರ್ಯದರ್ಶಿ ಮಹೇಶ್ ಜೆ ಶೆಟ್ಟಿ, ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಕಸ್ತೂರಿ ಪಿ. ಶೆಟ್ಟಿ, ವೈದ್ಯರಾದ ಮನೋಹರ ರೈ, ಸಂಸ್ಥೆಯ ಹಿತೈಷಿ ಉಗ್ಗಪ್ಪ ಶೆಟ್ಟಿ ಕೊಂಬಿಲ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.