Monday, January 20, 2025
ಸುದ್ದಿ

ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ವಿದ್ಯಾರ್ಥಿ ಒಕ್ಕೂಟ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ – ಕಹಳೆ ನ್ಯೂಸ್

ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡಕ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಜಿಲ್ಲೆ ಮತ್ತು ತಾಲ್ಲೂಕು ಇದರ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನಾ ಸಮಾರಂಭದಲ್ಲಿ ಇಂದು ದಿನಾಂಕ 22-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ ನೆರವೇರಿಸಿದ ಶಾಸಕರು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪರ್ಕಳ ರೋಟರಿ ಕ್ಲಬ್ ಅಧ್ಯಕ್ಷರಾದ ದಿನೇಶ್ ಹೆಗ್ಡೆ ಆತ್ರಾಡಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾಧ್ಯಕ್ಷರಾದ ಬಿ.ಎಲ್ ವಿಶ್ವಾಸ್, ಸಂಚಾಲಕರಾದ ಎನ್.ಎಸ್ ಶೆಟ್ಟಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಹರೀಶ್ ಸಾಲಿಯಾನ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷರಾದ ಅಮರನಾಥ ಶೆಟ್ಟಿ, ಪ್ರಾಂಶುಪಾಲರಾದ ಮಂಜುನಾಥ ಭಟ್, ಉಪನ್ಯಾಸಕರಾದ ದೇವದಾಸ್ ಪ್ರಭು, ಜಯಶ್ರೀ, ವಿದ್ಯಾರ್ಥಿ ನಾಯಕ ಬಸನ ಗೌಡ, ವಿದ್ಯಾರ್ಥಿ ನಾಯಕಿ ಜೆ.ಎಸ್ ಸಮೀಕ್ಷಾ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.