ಹೆಜಮಾಡಿ ಬಂದರಿಗೆ ಇಲಾಖಾಧಿಕಾರಿಗಳೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ಕಾಮಗಾರಿ ಪರಿಶೀಲನೆ – ಕಹಳೆ ನ್ಯೂಸ್
ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಬಂದರು ಅಭಿವೃದ್ಧಿಗೆ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ರೂ. 181 ಕೋಟಿ ಹಾಗೂ ಭೂ ಸ್ವಾಧೀನಕ್ಕೆ 7 ಕೋಟಿ ಸೇರಿದಂತೆ ಒಟ್ಟು 188 ಕೋಟಿ ರೂಪಾಯಿ ಅನುದಾನ ಮಂಜೂರಾಗಿ 60 ಶೇಖಡಾ ಕಾಮಗಾರಿ ಪೂರ್ಣಗೊಂಡಿದ್ದು, ಇಂದು ದಿನಾಂಕ 23-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದರು.
ಗುಣಮಟ್ಟವನ್ನು ಕಾಯ್ದುಕೊಂಡು ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿ ಬಾಕಿ ಇರುವ ಅನುದಾನದ ಬಿಡುಗಡೆಯ ಬಗ್ಗೆ ಮೀನುಗಾರಿಕಾ ಸಚಿವರಲ್ಲಿ ಈ ಬಗ್ಗೆ ಪ್ರಸ್ತಾಪಿಸಿ ಶೀಘ್ರದಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ, ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಹೆಜಮಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಾಣೇಶ್ ಹೆಜಮಾಡಿ, ಶರಣ್ ಮಟ್ಟು, ಜಗನ್ನಾಥ್, ನಳಿನಿ, ಸುಜಾತ, ಬಬಿತಾ, ಹೆಜಮಾಡಿ ಮೀನುಗಾರಿಕ ಬಂದರು ಸಮಿತಿಯ ಅಧ್ಯಕ್ಷರಾದ ಸದಾಶಿವ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಕುಂದರ್, ಪ್ರಧಾನ ಕಾರ್ಯದರ್ಶಿಗಳಾದ ವಿಜಯ ಬಂಗೇರ, ಮೀನುಗಾರ ಮುಖಂಡರಾದ ಹರೀಶ್ ಚಂದ್ರ ಮೆಂಡನ್, ನಾರಾಯಣ ಮೆಂಡನ್, ದಿವಾಕರ ಮೆಂಡನ್ ಮತ್ತು ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್ ಮೂರ್ತಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಉದಯ್ ಕುಮಾರ್, ಸಹಾಯಕ ಅಭಿಯಂತರರಾದ ಜಯರಾಜ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.