ಮದುವೆಯಾಗಲು ಕನ್ಯೆ ಸಿಗದ ಹಿನ್ನೆಲೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ 36 ವರ್ಷದ ಮಂಜುನಾಥ ನಾಗನೂರು ಎಂಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದು, ಕಳೆದ 7-8 ವರ್ಷಗಳಿಂದ ಕನ್ಯೆ ಹುಡುಕುತ್ತಿದ್ದ ಮಂಜುನಾಥಗೆ ಯಾರೊಬ್ಬರೂ ಹುಡುಗಿ ನೀಡಲು ಒಪ್ಪುತ್ತಿರಲಿಲ್ಲ.
ನನ್ನಿಂದ ತಂದೆ ತಾಯಿಗೆ ತೊಂದರೆ ಆಗುತ್ತಿದೆ ಅಂತ ಹೇಳಿ ಜೀವನದಲ್ಲಿ ಜಿಗುಪ್ಸೆಗೊಂಡು ಜಮೀನಿನಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.