ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ಉತ್ತರ ಮಂಡಲದ ಕಾವೂರು ಕಾರ್ಯಾಲಯದಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿಯವರ ಪುಣ್ಯತಿಥಿಯನ್ನು ಬಲಿದಾನ ದಿವಸವನ್ನು ಶಾಸಕರಾದ ಡಾ. ಭರತ್ ಶೆಟ್ಟಿಯವರ ನೇತೃತ್ವದಲ್ಲಿ ಆಚರಿಸಲಾಯಿತು.
ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಪ್ರಧಾನ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ, ಮುಖಂಡರಾದ ಮಹೇಶ್ ಮೂರ್ತಿ ಸುರತ್ಕಲ್, ಜನಪ್ರತಿನಿಧಿಗಳು, ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಮುಖಂಡರು ಉಪಸ್ಥಿತರಿದ್ದರು.