Friday, September 20, 2024
ಸುದ್ದಿ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಶಿವಸೇನೆ ಸೋಮವಾರ ಕೇರಳ ಬಂದ್‌ಗೆ ಕರೆ..! ಮೌನ ವಹಿಸಿದ ಸಂಪ್ರದಾಯವಾದಿ ಬಿಜೆಪಿ – ಕಹಳೆ ನ್ಯೂಸ್

ತಿರುವನಂತಪುರಂ, ಸೆ29 : ಕೇರಳದ ಶಬರಿಮಲೆ ದೇವಸ್ಥಾನದ ಒಳಗೆ ಎಲ್ಲ ವಯೋಮಾನದ ಮಹಿಳೆಯರಿಗೂ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುವಂತೆ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

ಇದೀಗ ಕೇರಳದ ಶಬರಿಮಲೆಯ ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಕಲ್ಪಿಸಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ವಿರೋಧಿಸಿ ಶಿವಸೇನೆಯು ಕೇರಳ ಬಂದ್ ಗೆ ಕರೆನೀಡಿದೆ. ತಾನು ಸಂಪ್ರದಾಯ ವಾದಿ ಎಂದು ಹೇಳಿಕೊಳ್ಳುವ ಬಿಜೆಪಿ ಮಾತ್ರ ಮೌನ ವಹಿಸಿರುವುದು ಕೇದಕರ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಶಬರಿಮಲೆ  ಅಯ್ಯಪ್ಪ ದೇವಾಲಯಕ್ಕೆ ಮಹಿಳೆಯರಿಗೆ ಪ್ರವೇಶ ಅವಕಾಶ ನೀಡಿರುವ ಸುಪ್ರೀಂಕೋರ್ಟ್‌ ತೀರ್ಪು ದೇಶಾದ್ಯಂತ ಬಹುಚರ್ಚಿತ ವಿಷಯವಾಗಿದೆ. ಅದರಲ್ಲೂ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶದಿಂದ ಶಬರಿಮಲೆಗೆ ಲಕ್ಷಾಂತರ ಭಕ್ತರು ಪ್ರತಿವರ್ಷ ದರ್ಶನಕ್ಕಾಗಿ ‌ಹೋಗುತ್ತಾರೆ. ಹೀಗಾಗಿ, ಕರ್ನಾಟಕದ ಭಕ್ತರ ವಲಯದಲ್ಲೂ ತೀರ್ಪು ನೋವನ್ನುಂಟುಮಾಡಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಕೋರ್ಟ್ ತೀರ್ಪನ್ನು ವಿರೋಧಿಸುವ ಸಂಘಟನೆಗಳು ಬಂದ್ ಗೆ ಬೆಂಬಲ ನೀಡುವ ಸಾಧ್ಯತೆ ಇದೆ. 800 ವರ್ಷಗಳ ಅಯ್ಯಪ್ಪ ದೇವಾಲಯದ ಇತಿಹಾಸದಲ್ಲಿ ಮಹಿಳೆಯರ ಪ್ರವೇಶಕ್ಕೆ ಅವಕಾಶವಿರಲಿಲ್ಲ. ಋತುಮತಿಯಾಗುವ ಹೆಣ್ಣು ಮಕ್ಕಳು ದೇವಾಲಯಕ್ಕೆ ಪ್ರವೇಶಿಸುವುದರಿಂದ ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆ ಬರುತ್ತದೆ ಎಂಬ ಕಾರಣಕ್ಕೆ ಈ ದೇವಾಲಯದ ಆಡಳಿತ ಮಂಡಳಿಯೇ ಮಹಿಳೆಯರ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

ಆದರೆ ಶುಕ್ರವಾರ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ಈ ನಿರ್ಬಂಧವನ್ನು ತೆರವುಗೊಳಿಸಲಾಗಿದ್ದು, ಸುಪ್ರೀಂ ತೀರ್ಪನ್ನು ಹಲವರು ಖಂಡಿಸಿದ್ದಾರೆ.