Thursday, January 23, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರಿನ ನೆಲಮಂಗಲದ ಧರ್ಮಸ್ಥಳ ಕ್ಷೇಮವನದಲ್ಲಿ ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ – ಕಹಳೆ ನ್ಯೂಸ್

ಬೆಂಗಳೂರು :ನೂತನ ಶಾಸಕರಿಗೆ ಇಂದಿನಿಂದ ಮೂರು ದಿನ ತರಬೇತಿ ಶಿಬಿರ ಆಯೋಜಿಸಲಾಗಿದೆ. ಶಾಸಕರಿಗೆ ಅಗತ್ಯ ತರಬೇತಿಯನ್ನು ಹಿಂದಿನಿಂದಲೂ ನೀಡಿದ್ದು, ಬೆಂಗಳೂರಿನ ನೆಲಮಂಗಲ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಇಂದಿನಿಂದ ಜೂ.28ರವರೆಗೆ ತರಬೇತಿ ಶಿಬಿರ ಆಯೋಜಿಸಲಾಗಿದೆ.

ಮಧ್ಯಾಹ್ನ 12 ಗಂಟೆಗೆ ಶಿಬಿರ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ವಿಧಾನಸಭೆಯ ಸಭಾಪತಿ ಯು.ಟಿ. ಖಾದರ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

70 ಶಾಸಕರಿಗೂ ತರಬೇತಿ ನಡೆಯಲಿದ್ದು, ನಿನ್ನೆ ಸಂಜೆಯೇ ಶಾಸಕರು ನೋಂದಣಿ ಮಾಡಿಸಿಕೊಂಡಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ರವರೆಗೂ ಕಾರ್ಯಕ್ರಮಗಳು ನಡೆಯಲಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿದಿನ ಸಂಜೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ನೂತನ ಶಾಸಕರ ಜೊತೆ ಸಂವಾದ ನಡೆಸಲಿದ್ದಾರೆ.