ಮಾಣಿ ಶ್ರೀ ಉಳ್ಳಾಲ್ತಿ ದೈವಸ್ತಾನಕ್ಕೆ ಸಂಬoಧಪಟ್ಟ ಧರ್ಮಚಾವಡಿಯ ಕುರಿತಂತೆ ಗ್ರಾಮಸ್ಥರ ಸಮಾಲೋಚನಾ ಸಭೆ – ಕಹಳೆ ನ್ಯೂಸ್
ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿಗುತ್ತು ಶ್ರೀ ಉಳ್ಳಾಲ್ತಿ, ಬೆಮ್ಮೆರ್, ಗುಡ್ಡೆಚಾಮುಂಡಿ, ಪಂಜುರ್ಲಿ, ಮಲೆಕೊರತಿ ದೈವಗಳ ಧರ್ಮಚಾವಡಿಯ ಜೀರ್ಣೋದ್ಧಾರದ ಸಲುವಾಗಿ ಗ್ರಾಮಸ್ಥರ ಸಮಾಲೋಚನಾ ಸಭೆಯು ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಮಾಣಿಗುತ್ತು ಸಚಿನ್ ರೈಯವರ ಅಧ್ಯಕ್ಷತೆಯಲ್ಲಿ ಜರುಗಿತು.
ಗ್ರಾಮಸ್ಥರ ಸಲಹೆ ಸೂಚನೆಗಳೊಂದಿಗೆ ಜೀರ್ಣೋದ್ಧಾರಕ್ಕೆ ಸಂಬoಧಪಟ್ಟು ವಿಚಾರವಿನಿಮಯವನ್ನು ಮಾಡಲಾಯಿತು. ಮತ್ತು ನೂತನ ಜೀರ್ಣೋದ್ಧಾರ ಸಮಿತಿಗೆ ಪದಾಧಿಕಾರಿಗಳನ್ನು ಮತ್ತು ಸದಸ್ಯರನ್ನು ನೇಮಿಸಲಾಯಿತು. ಈ ವೇಳೆ ದೈವಸ್ತಾನದ ಆಡಳಿತ ಮಂಡಳಿಯ ಪ್ರಮುಖರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.