Recent Posts

Sunday, January 19, 2025
ಬಂಟ್ವಾಳಸಂತಾಪಸುದ್ದಿ

ಮಾಣಿಲ: ಆಟೋ ಪಲ್ಟಿ – ಚಾಲಕ ಮೃತ್ಯು – ಕಹಳೆ ನ್ಯೂಸ್

ವಿಟ್ಲ: ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ.

ಆಟೋ ಚಾಲಕನನ್ನು ಸುಬ್ರಹ್ಮಣ್ಯ, ಪಂಜ ನಿವಾಸಿ ಸುದರ್ಶನ್ (35 ವ.) ಮೃತಪಟ್ಟವರಾಗಿದ್ದಾರೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಾಯಗೊಂಡ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆಟೋ ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಸಣ್ಣ ಪುಟ್ಟ ಗಾಯವಾಗಿರುವುದಾಗಿ ಮಾಹಿತಿ ಲಭಿಸಿದೆ.  ವಿಟ್ಲ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು