Recent Posts

Monday, January 20, 2025
ರಾಷ್ಟ್ರೀಯಸುದ್ದಿ

ಹಿಮಾಚಲ, ಉತ್ತರಾಖಂಡದಲ್ಲಿ ದಿಢೀರ್ ಪ್ರವಾಹ ಅವಾಂತರ ; ಅನಾಹುತದಲ್ಲಿ ನಾಲ್ವರು ಸಾವು – ಕಹಳೆ ನ್ಯೂಸ್

ಹಿಮಾಚಲಪ್ರದೇಶದ ಬಾಗಿಪುಲ್‍ನಲ್ಲಿ ದಿಢೀರ್ ಪ್ರವಾಹ ಉಂಟಾಗಿ 200 ಮಂದಿ ಅಪಾಯಕ್ಕೆ ಸಿಲುಕಿದ್ದಾರೆ. ಕುಲ್ಲು-ಮಂಡಿ ಹೈವೇಯಲ್ಲಿ ಗುಡ್ಡ ಕುಸಿತ ಉಂಟಾದ ಪರಿಣಾಮ ಸುಮಾರು 15 ಕಿಲೋಮೀಟರ್‍ನಷ್ಟು ಉದ್ದಕ್ಕೆ ವಾಹನಗಳು ಸಾಲುಗಟ್ಟಿವೆ. ಹಿಂದೆ ಹೋಗಲು ಆಗ್ತಿಲ್ಲ ಮುಂದೆ ಹೋಗಲು ದಾರಿ ಇಲ್ಲ. ಅಲ್ಲೆಲ್ಲೂ ಊಟ ವಸತಿಗಾಗಿ ಕನಿಷ್ಠ ಹೋಟೆಲ್ ಕೂಡ ಇಲ್ಲ. ಪ್ರವಾಸಿಗರಂತೂ ದಿಕ್ಕು ತೋಚದೇ ಕುಳಿತುಬಿಟ್ಟಿದ್ದಾರೆ.

ಕಾಮಾಂಡ್ ಪ್ರಾಂತ್ಯದಲ್ಲಿ ಹತ್ತಾರು ವಾಹನಗಳು ಸಿಲುಕಿವೆ. ಕೆಲವು ವಾಹನಗಳು ನೀರಲ್ಲಿ ಕೊಚ್ಚಿ ಹೋಗಿವೆ. ಮುಂದಿನ ಐದು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಾಖಂಡ್, ಹಿಮಾಚಲದಲ್ಲಿ ಮಳೆಗೆ ಐದಾರು ಮಂದಿ ಬಲಿ ಆಗಿದ್ದಾರೆ. ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅತ್ತ ಅಸ್ಸಾಂನಲ್ಲಿ ರಣಭೀಕರ ಪ್ರವಾಹಕ್ಕೆ ತತ್ತರಿಸಿದೆ. 15 ಜಿಲ್ಲೆಗಳ 2.72 ಲಕ್ಷ ಮಂದಿ ಪ್ರವಾಹ ಸಂತ್ರಸ್ತರಾಗಿದ್ದಾರೆ. ಮಹಾರಾಷ್ಟ್ರ ಕರಾವಳಿಯಲ್ಲಿ ಭಾರೀ ಮಳೆ ಆಗ್ತಿದೆ. ಒಡಿಶಾ, ರಾಜಸ್ಥಾನ, ಮಧ್ಯಪ್ರದೇಶ, ಗೋವಾ, ಛತ್ತೀಸ್‍ಘಡ, ಹಿಮಾಚಲ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಈಶಾನ್ಯ ರಾಜ್ಯಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಐಎಂಡಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಒಡಿಶಾ, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಗೋವಾ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಈಶಾನ್ಯ ರಾಜ್ಯಗಳ ಕೆಲ ಭಾಗಗಳಲ್ಲೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಉತ್ತರಾಖಂಡ, ಹಿಮಾಚಲದಲ್ಲಿ ಅನಾಹುತದಲ್ಲಿ ನಾಲ್ವರು ಸಾವು

ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಅನಾಹುತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ರುದ್ರಪ್ರಯಾಗ ಜಿಲ್ಲೆಯಲ್ಲಿ ಭೂಕುಸಿತದ ನಂತರ ವಾಹನ ಅವಶೇಷಗಳಡಿ ಸಿಲುಕಿ 50 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮೃತರನ್ನು ಅನಿಲ್ ಬಿಷ್ತ್ ಎಂದು ಗುರುತಿಸಲಾಗಿದೆ. ಮತ್ತೊಂದು ಘಟನೆಯಲ್ಲಿ, ಉತ್ತರಕಾಶಿ ಜಿಲ್ಲೆಯ ಪುರೋಲಾ ತಹಸಿಲ್‌ನ ಕ್ಯಾಂಡ್ಯಾಲ್ ಗ್ರಾಮದಲ್ಲಿ ಗದ್ದೆಯಲ್ಲಿ ನಾಟಿ ಮಾಡುವಾಗ ಯುವಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತರನ್ನು ಅಭಿಷೇಕ್ (20) ಎಂದು ಗುರುತಿಸಲಾಗಿದೆ. ಹಿಮಾಚಲ ಪ್ರದೇಶದಲ್ಲಿ, ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಹಮೀರ್‌ಪುರ ಮತ್ತು ಶಿಮ್ಲಾ ಜಿಲ್ಲೆಗಳಲ್ಲಿ ತಲಾ ಒಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟದಿಂದ ಹಠಾತ್ ಪ್ರವಾಹ ಉಂಟಾಯಿತು. ನಂತರ ಮಂಡಿ-ಕುಲು ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಮಂಡಿಯು ವ್ಯಾಪಕ ಹಾನಿಯನ್ನು ಅನುಭವಿಸಿದೆ. ಹಲವಾರು ಮನೆಗಳು ಮತ್ತು ಸೇತುವೆಗಳು ಹಾನಿಗೊಳಗಾಗಿವೆ.