ಬಂಟ್ವಾಳ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳವಿಗೆ ವಿಫಲ ಯತ್ನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.
ಕಾಲೇಜಿನ ಪ್ರಾಂಶುಪಾಲರ ಕೊಠಡಿಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿರುವ ಕಳ್ಳರು ಅಲ್ಲಿಯೇ ಇದ್ದ ಕೀಗಳಿಂದ ಕಪಾಟು ಹಾಗೂ ಮೇಜಿನ ಬಾಗಿಲುಗಳನ್ನು ತೆರೆದು ಕಪಾಟು ಹಾಗೂ ಮೇಜಿನೊಳಗಿದ್ದ ಹುಡುಕಾಟ ನಡೆಸಿದ್ದು ಅಗತ್ಯ ದಾಖಲಾತಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಯಾವುದೇ ಮೌಲ್ಯಯುತವಾದ ಸೊತ್ತುಗಳು ಕಳ್ಳತನವಾಗಿರುವುದು ಕಂಡು ಬಂದಿರುವುದಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲರು ಪುಂಜಾಲಕಟ್ಟೆ ಪೊಲೀಸರಿಗೆ ನೀಡಿದ ದೂರಿನಲ್ಲಿತಿಳಿಸಿದ್ದಾರೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸರು ಕೇಸು ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.