Monday, January 20, 2025
ಉಡುಪಿಸುದ್ದಿಹೆಚ್ಚಿನ ಸುದ್ದಿ

ಜುಲೈ 1ರಂದು ಉಡುಪಿಯಲ್ಲಿ ಪತ್ರಿಕಾ ದಿನಾಚರಣೆ –ಕಹಳೆ ನ್ಯೂಸ್

ಉಡುಪಿ : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿ, ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ಪತ್ರಿಕಾ ದಿನಾಚರಣೆಯನ್ನು ಉಡುಪಿ ಐಎಂಎ ಭವನದಲ್ಲಿ ಜು.1ರಂದು ಬೆಳಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಕುಂದಾಪುರ ಉಪವಿಭಾಗಾಧಿಕಾರಿ ರಶ್ಮಿ ಎಸ್.ಆರ್. ಉದ್ಘಾಟಿಸಲಿರುವರು. ಸುದ್ದಿಯಾನ ಡಿಜಿಟಲ್ ಮೀಡಿಯಾದ ಪ್ರಧಾನ ಸಂಪಾದಕ ಹರಿಪ್ರಸಾದ್ ಎ. ವಿಶೇಷ ಉಪನ್ಯಾಸ ನೀಡಲಿರುವರು. ಅಧ್ಯಕ್ಷತೆ ಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿರುವರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯ ಅತಿಥಿಗಳಾಗಿ ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಭಾಗವಹಿಸಲಿರುವರು. ಈ ಸಂದರ್ಭದಲ್ಲಿ ಕಾರ್ಕಳದ ಹಿರಿಯ ಪತ್ರಕರ್ತ ರಾಧಾಕೃಷ್ಣ ತೋಡಿಕಾನ ಅವರಿಗೆ ಪತ್ರಿಕಾ ದಿನಾಚರಣೆಯ ಗೌರವ ನೀಡಲಾಗುವುದು.

ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ಅರುಣ್ ಕುಮಾರ್ ಶಿರೂರು, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಉಡುಪಿ ಪತ್ರಿಕಾ ಭವನ ಸಮಿತಿ ಸಂಚಾಲಕ ಅಜಿತ್ ಆರಾಡಿ ಗೌರವ ಉಪಸ್ಥಿತರಿರುವರು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಹಾಗೂ ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ