Monday, January 20, 2025
ಸುದ್ದಿ

ಬಾವಿಗೆ ಬಿದ್ದು ವಿವಾಹಿತ ಮಹಿಳೆ ಆತ್ಮಹತ್ಯೆ – ಕಹಳೆ ನ್ಯೂಸ್

ವಿಟ್ಲ : ವಿವಾಹಿತ ಮಹಿಳೆಯೋರ್ವರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಜೋಗಿಮಠ ಎಂಬಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಂಟ್ವಾಳ ತಾಲೂಕು ಕೈರಂಗಳ ಗ್ರಾಮದ ಮೋಟುಗೋಳಿ ಮುನೀರ್ ಕಾಟೇಜ್ ನ ಅಬ್ದುಲ್ ರಹಿಮಾನ್ ರವರ ಪುತ್ರಿ ಅನಿಶಾ (34 ವ.) ಮೃತ ದುರ್ದೈವಿ

ನನ್ನ ಅಕ್ಕ ಮೂರನೇ ಹೆರಿಗೆಯಾದ ಬಳಿಕದ ದಿನಗಳಿಂದ ಯಾವುದೋ ಕಾರಣಕ್ಕಾಗಿ ಮಾನಸಿಕವಾಗಿ ನೊಂದು ವಿಟ್ಲ ಕಸಬ ಗ್ರಾಮದ ಜೋಗಿಮಠದಲ್ಲಿರುವ ಆಕೆಯ ಮನೆಯ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆಯ ಸಾವಿನಲ್ಲಿ ಯಾವುದೇ ಸಂಶಯವಿಲ್ಲ ಎಂದು ಮೃತರ ಸಹೋದರ ಮುನೀರ್ ಅಹಮ್ಮದ್ ರವರು ವಿಟ್ಲ ಠಾಣಾ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಘಟನೆಗೆ ಸಂಬoಧಿಸಿದoತೆ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.