Thursday, April 3, 2025
ಕ್ರೈಮ್ಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ : ಆರೋಪಿಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಬೆಳ್ತಂಗಡಿ : ನೆರಿಯ ಗ್ರಾಮದ ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ. (41) ಎಂಬಾತನ ಪತ್ನಿ ಸೌಮ್ಯ ಫ್ರಾನ್ಸಿಸ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ ಸನೋಜ್ ಫ್ರಾನ್ಸಿಸ್ ರವರು ನೀಡಿದ ದೂರಿನಂತೆ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ಜೂ.27 ರಂದು ಅವರನ್ನು ನ್ಯಾಯಾಲಕ್ಕೆ ಹಾಜರುಪಡಿಸಿದರು.

ಈ ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರು ಮಾನ್ಯ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಹೆಚ್ ಎಸ್ ರವರು ಜೂ. 27 ರಂದು ಅಪರಾಧಿಗೆ ಕಲಂ :  498 (ಎ) ಐಪಿಸಿ ಅಪರಾಧಕ್ಕೆ ಮೂರು ವರ್ಷಗಳ ಕಠಿಣ ಸಜೆ ಹಾಗೂ 10 ಸಾವಿರ ರೂ ದಂಡ ಹಾಗೂ ಕಲಂ: 304 ಐಪಿಸಿ ಅಪರಾಧಕ್ಕಾಗಿ 7 ವರ್ಷಗಳ ಕಠಿಣ ಸಜೆ ಮತ್ತು 10 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ವಿವರ : ಬೆಳ್ತಂಗಡಿ ತಾಲೂಕು ನೆರಿಯ ಕಾಡು ನಿವಾಸಿ ಜೋನ್ಸನ್ ಕೆ.ಎಂ ಎಂಬಾತ ಸೌಮ್ಯ ಫ್ರಾನ್ಸಿಸ್ ರವರನ್ನು ಮದುವೆಯಾದ ಸ್ವಲ್ಪ ಸಮಯದ ನಂತರ ಪತ್ನಿಯೊಂದಿಗೆ ವಿನಾಕಾರಣ ಕ್ಷುಲ್ಲಕ ವಿಚಾರದಲ್ಲಿ ಅವಾಚ್ಯ ಶಬ್ದಗಳಿಂದ ಬೈದು ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದವನು , ದಿನಾಂಕ 07.01.2021 ರಂದು ರಾತ್ರಿ ಸುಮಾರು 7.30 ಗಂಟೆಯಿಂದ 8.30 ಗಂಟೆಯ ಮದ್ಯೆ ತನ್ನ ಮನೆಯಲ್ಲಿ ಹೆಂಡತಿಯ ಜೊತೆ ಮಾತಿನ ಗಲಾಟೆ ನಡೆಸಿ ಮರದ ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸೌಮ್ಯರವರು ಮೃತಪಟ್ಟಿದ್ದು ಈ ಬಗ್ಗೆ ಮೃತರ ಅಣ್ಣ ಸನೋಜ್ ಫ್ರಾನ್ಸಿಸ್ ರವರು ದಿನಾಂಕ:08/01/2021 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸ್ ಠಾಣೆಯಲ್ಲಿ ಅಕ್ರ: 02/2021 ಕಲಂ: 498(ಎ) 302 ಜೊತೆಗೆ 34 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಬಳಿಕ ಆ ಸಮಯದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರು ಪ್ರಕರಣದಲ್ಲಿ ಆರೋಪಿ ಜಾನ್ಸನ್ ಕೆ ಎಂ ಎಂಬಾತನನ್ನು ಬಂಧಿಸಿ ಸೂಕ್ತ ಸಾಕ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ನಡೆಸಿ ಆರೋಪಿಯ ವಿರುದ್ದ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ