Sunday, January 19, 2025
ರಾಷ್ಟ್ರೀಯಶುಭಾಶಯಸುದ್ದಿಹೆಚ್ಚಿನ ಸುದ್ದಿ

ಬಕ್ರೀದ್ ಆಚರಣೆಗೆ ಟ್ವೀಟ್ ಮೂಲಕ ಶುಭಕೋರಿದ ರಾಷ್ಟ್ರಪತಿ ಹಾಗೂ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಮುಸ್ಲಿಂ ಬಾಂಧವರು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.

ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಭಾಶಯಗಳನ್ನು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈದ್-ಉಲ್-ಅಧಾ ದ ಶುಭಾಶಯಗಳು. ಈ ದಿನ ಎಲ್ಲರಿಗೂ ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಇದು ನಮ್ಮ ಸಮಾಜದಲ್ಲಿ ಒಗ್ಗಟ್ಟು ಮತ್ತು ಸಾಮರಸ್ಯದ ಮನೋಭಾವವನ್ನು ಎತ್ತಿ ಹಿಡಿಯಲಿ ಈದ್ ಮುಬಾರಕ್ ಎಂದು ಟ್ವಿಟರ್ ಮೂಲಕ ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.

ಟ್ವೀಟ್ ಮೂಲಕ ಶುಭ ಕೋರಿರುವ ರಾಷ್ಟ್ರಪತಿ ಮುರ್ಮು ಅವರು, ಪ್ರೀತಿ, ತ್ಯಾಗದ ಪವಿತ್ರ ಹಬ್ಬವಾಗಿದೆ. ಈ ಹಬ್ಬವು ಪರಿತ್ಯಾಗದ ಮಾರ್ಗವನ್ನು ಅನುಸರಿಸಲು ಮತ್ತು ಮಾನವೀಯತೆಯ ಸೇವೆಯನ್ನು ನಿಸ್ವಾರ್ಥವಾಗಿ ಮಾಡಲು ಪ್ರೇರೇಪಿಸುತ್ತದೆ. ಈ ಸಂದರ್ಭದಲ್ಲಿ ಸಮಾಜದಲ್ಲಿ ಪರಸ್ಪರ ಸೌಹಾರ್ದತೆಯನ್ನು ಹೆಚ್ಚಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ತಿಳಿಸಿದ್ದಾರೆ.