Tuesday, January 21, 2025
ಸುದ್ದಿ

ಪ್ರೌಢಶಾಲಾ ಮುಖ್ಯೋಪಾಧ್ಯಾಯರೆ ಅಕ್ಷರ ದಾಸೋಹದ ಅಧಿಕಾರಿಗಳಾಗಿ ಮುಂದುವರಿಯಲಿ ; ಸಹ ಶಿಕ್ಷಕ ಸಂಘದಿಂದ ಶಿಕ್ಷಣ ಆಯುಕ್ತರಿಗೆ ಮನವಿ – ಕಹಳೆ ನ್ಯೂಸ್

ಮೂಡುಬಿದಿರೆ : ಪ್ರೌಢಶಾಲಾ ಮುಖ್ಯೋಪಾಧ್ಯಾಯರನ್ನೇ ತಾಲೂಕು ಮಟ್ಟದ ಅಕ್ಷರ ದಾಸೋಹ ಅಧಿಕಾರಿಗಳನ್ನಾಗಿ ಮುಂದುವರಿಸಬೇಕು ಎಂದು ಪ್ರೌಢಶಾಲಾ ಸಹ ಶಿಕ್ಷಕ ಸಂಘದಿoದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ರಾಜ್ಯ ಶಿಕ್ಷಣ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಗಿದೆ. ಎಂದು ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಡಾ. ರಾಮಕೃಷ್ಣ ಶಿರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯ ಸರ್ಕಾರದ ಅಕ್ಷರ ದಾಸೋಹದ ತಾಲೂಕು ಮಟ್ಟದ ಅಧಿಕಾರಿಗಳಾಗಿ ಹಲವು ವರ್ಷಗಳಿಂದ ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಉತ್ತಮವಾದ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಅಕ್ಷರ ದಾಸೋಹದ ಜವಾಬ್ದಾರಿಯ ಜೊತೆಯಲ್ಲಿ ಗುಣಮಟ್ಟದ ಶಿಕ್ಷಣದ ಬಗ್ಗೆ ಶಾಲಾ ಹಂತದಲ್ಲಿ ಶೈಕ್ಷಣಿಕ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನದ ಕರ್ತವ್ಯವನ್ನೂ ನಿರ್ವಹಿಸುತ್ತಾ ಬಂದಿದ್ದಾರೆ. ಆದುದರಿಂದ ರಾಜ್ಯದ ಎಲ್ಲಾ ತಾಲೂಕು ಹಂತದಲ್ಲಿ ಪ್ರೌಢಶಾಲಾ ಮುಖ್ಯೋಪಾಧ್ಯಾಯರನೇ ಅಕ್ಷರ ದಾಸೋಹ ಅಧಿಕಾರಿಗಳನ್ನಾಗಿ ಮುಂದುವರಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ರಾಜ್ಯ ಶಿಕ್ಷಣ ಆಯುಕ್ತರಿಗೆ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ತಾಲೂಕು ಘಟಕದ ವತಿಯಿಂದ ಮನವಿ ನೀಡಲಾಯಿತು.

ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕ ಸಂಘದ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ಡಾ.ರಾಮಕೃಷ್ಣ ಶಿರೂರು, ಸಂಘಟನಾ ಕಾರ್ಯದರ್ಶಿ ಸೀಮಾ ನಾಯಕ್, ಪದಾಧಿಕಾರಿಗಳಾದ ಸುದರ್ಶನ ರಾವ್ ಈ ಸಂದರ್ಭದಲ್ಲಿದ್ದರು.