ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ರಸ್ತೆಯ ಬಳಿ ಇಂದು ಮಧ್ಯಾಹ್ನದ ವೇಳೆಗೆ ನಾಗರ ಹಾವೊಂದು ದ್ವಿಚಕ್ರ ವಾಹನದ ಚಕ್ರಕ್ಕೆ ಸಿಲುಕಿ ಗಾಯಗೊಂಡು ಜೀವನ್ಮರಣ ಸ್ಥಿತಿಯಲ್ಲಿದ್ದುದ್ದನ್ನು ಕಂಡ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಹಾವನ್ನು ಚಿಕಿತ್ಸೆಗಾಗಿ ಉಡುಪಿಯ ವನ್ಯಜೀವಿ ಪಶುವೈದ್ಯ ಡಾ. ಯಶಸ್ವಿಯವರ ಖಾಸಗೀ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿರುತ್ತಾರೆ.
ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಇದೀಗ ಹಾವು ಚೇತರಿಸಿಕೊಂಡಿದೆ.ವಲಯಾರಣ್ಯಾಧಿಕಾರಿ ಹೇಮಗಿರಿ ಅಂಗಡಿ ಅವರ ಮಾರ್ಗದರ್ಶನದಲ್ಲಿ ಉಪವಲಯಾರಣ್ಯಾಧಿಕಾರಿ ಮಂಜುನಾಥ ಗಾಣಿಗ ಮತ್ತು ಶಂಕರ್ ಅವರು ಆಸ್ಪತ್ರೆಗೆ ದಾಖಲಿಸಿದ್ದರು.