Monday, January 20, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದ ಯುವತಿಗೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ್ದ ಕಡಬದ ರೆಹಮಾನ್ ; ಹೊಟೇಲ್ ರೂಂ ಮಾಡಿ ನಿರಂತರ 20 ದಿನ ದೈಹಿಕ ಸಂಪರ್ಕ ಬೆಳೆಸಿದ್ದ ಕಾಮುಕನ ಬಂಧನ! – ಕಹಳೆ ನ್ಯೂಸ್

ಸುಳ್ಯ : ಇನ್ಸ್ಟಾಗ್ರಾಂ ಮೂಲಕ ಪರಿಚಯವಾದ ಯುವತಿಗೆ ವಂಚಿಸಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಮಂಗಳೂರು ಪೊಲೀಸರು ಇಂದು (ಜೂನ್ ೨೯) ರಂದು ಬಂಧಿಸಿದ್ದಾರೆ.

ಇನ್ಸ್ಟಾಗ್ರಾಂ ಮೂಲಕ ಅನೀಶ್ ರೆಹಮಾನ್ ಗೆ ಪರಿಚಯವಾಗಿದ್ದ ಯುವತಿಯನ್ನು ನಂಬಿಸಿ, ಆಕೆಯ ಜೊತೆ ನಿರಂತರ ದೈಹಿಕ ಸಂಪರ್ಕ ಬೆಳೆಸಿದ್ದ ಆರೋಪಿ, ಹೊಟೇಲ್ ನಲ್ಲಿ ರೂಂ ಮಾಡಿ ನಿರಂತರ 20 ದಿನಗಳ ಕಾಲ ದೈಹಿಕ ಸಂಪರ್ಕ ಮಾಡಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದರೆ ಆತನಿಗೆ ಮದುವೆಯಾಗಿರುವ ವಿಚಾರ ತಿಳಿದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಐಪಿಸಿ 506, 417 ಹಾಗೂ 376 ರಡಿ ಕೇಸು ದಾಖಲಿಸಿ ಅನೀಶ್ ರೆಹಮಾನ್ ನನ್ನು ಪೊಲೀಸರು ಅರೆಸ್ಟ್ ಮಾಡಿದ್ದು, ಈ ಹಿಂದೆ ಈತ ಕಾವೂರು ಠಾಣಾ ವ್ಯಾಪ್ತಿಯಲ್ಲೂ ಗಾಂಜಾ ಸೇವನೆ ಕೇಸ್‌ ನಲ್ಲಿ ಬಂಧಿತನಾಗಿದ್ದ ಎಂದು ವರದಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು