Monday, April 7, 2025
ಸುದ್ದಿ

ಜುಲೈ 1ರಂದು ಮೂಡುಬಿದಿರೆಯಲ್ಲಿ ಮಾಧ್ಯಮ ಹಬ್ಬ – ಕಹಳೆ ನ್ಯೂಸ್

ಮೂಡುಬಿದಿರೆ : ರಂಜತ ಸಂಭ್ರಮದಲ್ಲಿರುವ ಮೂಡುಬಿದಿರೆ ಪ್ರೆಸ್‌ಕ್ಲಬ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಮೂಡುಬಿದಿರೆ ಆಶ್ರಯದಲ್ಲಿ ಮಾಧ್ಯಮ ಹಬ್ಬ 2023 ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜುಲೈ 1ರಂದು ಸಮಾಜಮಂದಿರದಲ್ಲಿ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಘದ ಅಧ್ಯಕ್ಷ ಯಶೋಧರ ವಿ.ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ರಜತ ಸಂಭ್ರಮಕ್ಕೆ ಚಾಲನೆ ನೀಡಲಿರುವರು.

ಶಾಸಕ ಉಮಾನಾಥ ಎ.ಕೋಟ್ಯಾನ್, ಮಾಜಿ ಸಚಿವ, ಸಮಾಜಮಂದಿರ ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮೂಡುಬಿದಿರೆ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷ ರೇಮಂಡ್ ಡಿ’ಕುನ್ಹಾ ಮುಖ್ಯ ಅತಿಥಿಗಳಾಗಿರುವರು. ನವ್ಯವಾಣಿ ಪತ್ರಿಕೆಯ ಸಂಪಾದಕ ಪಾರ್ಶ್ವನಾಥ ಜೈನ್ ಅವರನ್ನು ಸನ್ಮಾನಿಸಲಾಗುವುದು.

ಮಂಗಳೂರು ವಿವಿ ಗೌರವ ಡಾಕ್ಟರೇಟ್ ಪುರಸ್ಕೃತ, ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೆöÊ.ಲಿಮಿಟೆಡ್‌ನ ಆಡಳಿತ ನಿರ್ದೇಶಕ ಡಾ.ಜಿ ರಾಮಕೃಷ್ಣ ಆಚಾರ್ ಅವರನ್ನು ಗೌರವಿಸಲಾಗುವುದು. ವಿಠಲ-ಶಾರದ ಭಾಗೀರಥಿ ಹೆಗಡೆಕಟ್ಟೆ ದತ್ತಿ ಉಪನ್ಯಾಸದಲ್ಲಿ ಪ್ರಚಲಿತ ಪತ್ರಿಕೋದ್ಯಮ ವಿಷಯದ ಕುರಿತು ವಿಜಯಕರ್ನಾಟಕ ಪತ್ರಿಕೆಯ ಮಂಗಳೂರು ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ ಉಪನ್ಯಾಸ ನೀಡಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರೇಮಶ್ರೀ ಎಂ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ