ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಹಿರಿಯಡಕ ಶಾಸಕರ ಕಚೇರಿ ಉದ್ಘಾಟನಾ ಸಮಾರಂಭ ಇಂದು ನಡೆಯಿತು.
ಶಾಸಕರು ಅಂಜಾರು, ಮರ್ಣೆ, ಮಣಿಪುರ, ಬೊಮ್ಮರಬೆಟ್ಟು ಗ್ರಾಮದ ಒಟ್ಟು 17 ಫಲಾನುಭವಿಗಳಿಗೆ 94/ಸಿ ಹಾಗೂ 94/ಸಿ.ಸಿ ಅಡಿ ಹಕ್ಕುಪತ್ರ ವಿತರಿಸಿ ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವೃದ್ಧಾಪ್ಯ ವೇತನ, ಅಂಗವಿಕಲರ ವೇತನದ ಮಂಜೂರಾತಿ ಆದೇಶ ಪತ್ರವನ್ನು ವಿತರಿಸಿದ ಅವರು ವಾರದಲ್ಲಿ ಪ್ರತಿ ಸೋಮವಾರ ಹಿರಿಯಡಕ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯವಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ವೀಣಾ ಶೆಟ್ಟಿ, ಕಾಪು ಮಂಡಲ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಸುಮಾ ಶೆಟ್ಟಿ, ಬೈರಂಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ರಾಷ್ಟ್ರೀಯ ಮಹಿಳಾ ಆಯೋಗದ ನಿಕಟಪೂರ್ವ ಸದಸ್ಯರಾದ ಶ್ಯಾಮಲ ಕುಂದರ್, ಜಿಲ್ಲಾ ಪಂಚಾಯತ್ ನಿಕಟ ಪೂರ್ವ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಹಿರಿಯರು, ಮುಖಂಡರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.