Recent Posts

Sunday, January 19, 2025
ಸುದ್ದಿ

ತರಕಾರಿ ಬೆಲೆ ಏರಿಕೆಯಿಂದ ಕಂಗಾಲಾದ ಗ್ರಾಹಕರಿಗೆ ಗುಡ್ ನ್ಯೂಸ್ – ಕಹಳೆ ನ್ಯೂಸ್

ನವದೆಹಲಿ: ಭಾರಿ ಏರಿಕೆ ಕಂಡಿರುವ ಟೊಮೆಟೊ ಮತ್ತು ತೊಗರಿ ಬೇಳೆ ಬೆಲೆ ಇಳಿಕೆ ಮಾಡಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ.

ಇನ್ನು 15 ದಿನಗಳಲ್ಲಿ ಟೊಮೆಟೊ ಬೆಲೆ ಇಳಿಕೆ ಆಗಲಿದೆ ಎಂದು ಕೇಂದ್ರ ಸರ್ಕಾರ ಭರವಸೆ ನೀಡಿದೆ. ಟೊಮೆಟೊ ಉತ್ಪಾದನೆ ಮತ್ತು ಪೂರೈಕೆ ಹೆಚ್ಚಳವಾಗಿದ್ದು, ಇನ್ನೂ 15 ದಿನಗಳಲ್ಲಿ ಬೆಲೆ ಇಳಿಕೆ ಆರಂಭವಾಗಲಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚುವರಿಯಾಗಿ 12 ಲಕ್ಷ ಟನ್ ತೊಗರಿ ಬೇಳೆ ಆಮದು ಮಾಡಿಕೊಳ್ಳಲಾಗುತ್ತಿದ್ದು, ಕೆಜಿಗೆ 180 ರೂ.ವರೆಗೂ ತಲುಪಿರುವ ತೊಗರಿ ಬೇಳೆ ಬೆಲೆ ಇಳಿಸಲು ಕೇಂದ್ರ ಸರ್ಕಾರ ಕಳೆದ ವರ್ಷಕ್ಕಿಂತ ಹೆಚ್ಚುವರಿಯಾಗಿ ಶೇಕಡ 35 ರಷ್ಟು ತೊಗರಿ ಬೇಳೆ ಆಮದಿ ಮಾಡಿಕೊಳ್ಳಲು ನಿರ್ಧರಿಸಿದೆ. ಇದರಿಂದ ತೊಗರಿ ಬೇಳೆ ಬೆಲೆ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು