Recent Posts

Monday, January 20, 2025
ಮೂಡಬಿದಿರೆಸುದ್ದಿ

ಪತ್ರಿಕಾ ದಿನಾಚರಣೆ ; ನವ್ಯವಾಣಿ ಸಂಪಾದಕ ಪಾರ್ಶ್ವನಾಥರಿಗೆ  ಸನ್ಮಾನ – ಕಹಳೆ ನ್ಯೂಸ್

ಮೂಡುಬಿದಿರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಮೂಡುಬಿದಿರೆ ಪ್ರೆಸ್ ಕ್ಲಬ್(ರಿ.) ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಶನಿವಾರ ಸಮಾಜ ಮಾಧ್ಯಮ ಹಬ್ಬ ನಡೆಯಿತು.

ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಯಶೋಧರ ವಿ.ಬಂಗೇರ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಸಕ ಉಮಾನಾಥ ಕೋಟ್ಯಾನ್ ಅವರು ಉದ್ಘಾಟಿಸಿ ಮಾತನಾಡಿ ಸಮಾಜದ ಅಂಕುಡೊಂಕು ತಿದ್ದುವ, ಸಮರ್ಥವಾಗಿ ಜನರಿಗೆ ಮಾಹಿತಿ ನೀಡುವ ಕೆಲಸ ಪತ್ರಕರ್ತರು ಮಾಡಬೇಕಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಶ್ರಾಂತ ಪತ್ರಕರ್ತ ಸದಾನಂದ ಹೆಗಡೆಕಟ್ಟೆ ಅವರು ರಜತ ಸಂಭ್ರಮಕ್ಕೆ ಚಾಲನೆ ನೀಡಿ ಪರೋಪಕಾರದೊಂದಿಗೆ ನಡೆಸುವ ಜೀವನ ಸಾರ್ಥಕವೆನಿಸುತ್ತದೆ ಎಂದರು.
ಕಳೆದ 13 ವರ್ಷಗಳಿಂದ ನವ್ಯವಾಣಿ ಪತ್ರಿಕೆಯನ್ನು ನಡೆಸುತ್ತಾ ಬಂದಿರುವ ಸಂಪಾದಕ ಪಾರ್ಶ್ವನಾಥ ಜೈನ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ ಅವರು ಪ್ರಚಲಿತ ಪತ್ರಿಕೋದ್ಯಮ ವಿಷಯದ ಕುರಿತು ದತ್ತಿ ಉಪನ್ಯಾಸ ನೀಡಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು. ಪ್ರೆಸ್ ಕ್ಲಬ್ ಸ್ಥಾಪಕಾಧ್ಯಕ್ಷ ರೇಮಂಡ್ ತಾಕೊಡೆ ಅವರು ಮಾತನಾಡಿದರು. ಉದ್ಯಮಿ ಶ್ರೀಪತಿ ಭಟ್ ಪ್ರೆಸ್ ಕ್ಲಬ್ ಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಗೌರವಿಸಲಾಯಿತು.