Recent Posts

Monday, January 20, 2025
ಪುತ್ತೂರುಬಂಟ್ವಾಳಸಂತಾಪಸುದ್ದಿ

ಬಂಟ್ವಾಳ: ಆತ್ಮಹತ್ಯೆಗೆ ಯತ್ನಿಸಿದ ದಂಪತಿ : ಪತಿ ಸಾವು – ಪತ್ನಿ ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆ ಗೆ ಯತ್ನಿಸಿ, ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಓರ್ವ ಮೃತಪಟ್ಟ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿ ನಡೆದಿದೆ ‌.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅನಂತಾಡಿ ಬಾಕಿಲ ನಿವಾಸಿ ಬಸ್ ಚಾಲಕ ಪ್ರತಾಪ್ ಹಾಗೂ ಆತನ ಪತ್ನಿ ವೀಣಾ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಗಳು. ಪ್ರತಾಪ್ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವೈದ್ಯರು ದೃಡಪಡಿಸಿದ ಬಗ್ಗೆ ಪೋಲೀಸರು ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಇಬ್ಬರು ಆತ್ಮಗೆ ಯತ್ನಿಸಿದ್ದು ಘಟನೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಇವರಿಗೆ ಐದು ವರ್ಷದ ಅವಳಿಜವಳಿ ಇಬ್ಬರು ಮಕ್ಕಳಿದ್ದಾರೆ‌.
ಎದುರು ಮನೆಯಲ್ಲಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ನೆರೆಮನೆಯವರಿಗೆ ತಿಳಿಸಿದ್ದಾರೆ ‌.

ಕೂಡಲೇ ಇವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು,ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪ್ರತಾಪ್‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ವೀಣಾ ಅವರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.
ಸ್ಥಳಕ್ಕೆ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಬೇಟಿ ನೀಡಿ ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.