Sunday, January 19, 2025
ಮೈಸೂರುರಾಜಕೀಯರಾಜ್ಯಸುದ್ದಿ

ಫೇಸ್‌ಬುಕ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ : ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್ – ಕಹಳೆ ನ್ಯೂಸ್

ಫೇಸ್‌ಬುಕ್‌ನಲ್ಲಿ ಸಂಸದ ಪ್ರತಾಪ್ ಸಿಂಹ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ್ದ ಮೈಸೂರಿನ ವಿವಿ ಪುರಂ ಠಾಣೆಯ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್  ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಇಲಾಖಾ ವಿಚಾರಣೆ ಬಾಕಿ ಇರಿಸಿ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್  ಬಿ.ಪ್ರದೀಪ್ ಅವರನ್ನು ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಟ್ರಾಫಿಕ್ ಹೆಡ್ ಕಾನ್ಸ್ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದು, ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಹಾಕಲಾಗಿದ್ದ ಕಮೆಂಟ್ ಸ್ಕ್ರೀನ್‌ ಶಾಟ್ ಜೊತೆ ಪೊಲೀಸ್ ಕಮಿಷನರ್‌ಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ದೂರಿನ ಮೇರೆಗೆ ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.