Sunday, January 19, 2025
ಸುದ್ದಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಆರೋಪಿಗಳಿಗೆ ನೀಡಿದ ಗಡುವು ಅಂತ್ಯ – ಕಹಳೆ ನ್ಯೂಸ್

ಪುತ್ತೂರು ; ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಆರೋಪಿಗಳ ಶರಣಾಗತಿಗೆ ಸೂಚಿಸಿದ ಅವಧಿ ಮುಗಿದಿದ್ದು. ತನಿಖಾ ಸಂಸ್ಥೆಯ ಮುಂದಿನ ವಿಚಾರದ ಕುರಿತು ಬಹಳ ಕುತೂಹಲ ಮೂಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಪ್ರಕರಣಕ್ಕೆ ಸಂಬAಧಿಸಿದAತೆ ಆರೋಪಿಗಳು ಜೂ.30ರೊಳಗೆ ಶರಣಾಗಬೇಕು, ಇಲ್ಲವೇ ಆರೋಪಿಗಳ ಮನೆ, ಆಸ್ತಿ ಮುಟ್ಟುಗೋಲು ಹಾಕುವುದಾಗಿ ಸೂಚನೆ ನೀಡಲಾಗಿತ್ತು. ಅದರೊಂದಿಗೆ ಧ್ವನಿವರ್ಧಕದ ಮೂಲಕ ಉದ್ಘೋಷಣೆ ಮಾಡಿ, ಆರೋಪಿಗಳ ಮನೆಗಳಲ್ಲೂ ಭಿತ್ತಿಪತ್ರ ಹಚ್ಚುವ ಮೂಲಕ ಮಾಹಿತಿ ನೀಡಲಾಗಿತ್ತು. ಆದರೆ ಆರೋಪಿಗಳು ಶರಣಾಗಿಲ್ಲ ಎಂದು ತಿಳಿದುಬಂದಿದೆ.

ಇನ್ನು ತಲೆಮರೆಕೊಂಡಿರುವ ಆರೋಪಿಗಳ ಆಸ್ತಿ ಜಪ್ತಿ ಮಾಡಬಹುದು ಎನ್ನಲಾಗಿತ್ತು ಆದರೆ ಇದಕ್ಕೂ ಸಮಯ ತಗಲುತ್ತದೆ. ಆರೋಪಿಯ ಹೆಸರಿನಲ್ಲಿರುವ ಚರಾಸ್ತಿ ಹಾಗೂ ಸ್ಥಿರಾಸ್ತಿಗಳ ಮಾಹಿತಿಯನ್ನು ಎನ್‌ಐಎ ಅಧಿಕಾರಿಗಳು ಕಂದಾಯ ಇಲಾಖೆ, ಬ್ಯಾಂಕ್‌ಗಳು ಮತ್ತಿತರ ಮೂಲಗಳಿಂದ ಸಂಗ್ರಹಿಸಿ, ಆರೋಪಿಗಳ ಹೆಸರಿನಲ್ಲಿರುವ ಆಸ್ತಿಗಳ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ, ಬಳಿಕ ಆರೋಪಿಯದ್ದೇ ಆಸ್ತಿ ಎಂದು ದೃಢೀಕರಣಗೊಂಡಲ್ಲಿ ಮುಟ್ಟುಗೋಲು ಹಾಕಿಕೊಂಡು ಸರಕಾರದ ವಶಕ್ಕೆ ಪಡೆಯಯಬಹುದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಪ್ರಕರಣದಲ್ಲಿ ಆರೋಪಿಗಳು ವಿದೇಶಕ್ಕೆ ಪರಾರಿಯಾಗಿರುವ ಬಗ್ಗೆ ಶಂಕೆಯಿದ್ದು ಅದಕ್ಕೆ ಸಬಂಧಿಸಿದoತೆ ತನಿಕೆ ನಡೆಯುತ್ತಿದೆ.

ಪ್ರಕರಣದಲ್ಲಿ ಅಬ್ದುಲ್ ನಾಸಿರ್, ಅಬ್ದುಲ್ ರೆಹಮಾನ್ ಮತ್ತು ಬೆಳ್ತಂಗಡಿಯ ನೌಷಾದ್ ಹಾಗೂ ಮತ್ತೆ ಐವರು ಸೇರಿ ಒಟ್ಟು 8 ಮಂದಿ ಶಂಕಿತ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇನ್ನು ತುಫೈಲ್, ಮೊಹಮ್ಮದ್ ಮುಸ್ತಾಫ ಸುಳಿವಿಗೆ ತಲಾ 5 ಲಕ್ಷ ರೂ. ಹಾಗೂ ಉಮ್ಮರ್ ಫಾರೂಕ್, ಅಬೂಬಕ್ಕರ್ ಸಿದ್ದಿಕ್ ಸುಳಿವು ನೀಡಿದಲ್ಲಿ ತಲಾ 2 ಲಕ್ಷ ರೂ. ಬಹುಮಾನವನ್ನು ಘೋಷಿಸಲಾಗಿದೆ.