Recent Posts

Monday, January 20, 2025
ಸುದ್ದಿ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ – ಕಹಳೆ ನ್ಯೂಸ್

ಬoಟ್ವಾಳ : ಗಾಂಜಾ ಸೇವನೆಯ ಪ್ರಕರಣದಲ್ಲಿ ಆರೋಪಿಯಾಗಿದ್ದು, 8 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು ಕೊಟೆಕಾರ್ ಮಜಲು ನಿವಾಸಿ ಮೂಸಬ್ಬ ಅವರ ಮಗ ಸಿದ್ದೀಕ್ ಬಂಧಿತ ಆರೋಪಿ ಈತ 2015 ರ ಡಿಸೆಂಬರ್ ನಲ್ಲಿ ಸಾರ್ವಜನಿಕ ಸ್ಥಳವೊಂದರಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ವೇಳೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಬಳಿಕ ಈತನ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಆರೋಪಿ  ಷರತ್ತು ಬದ್ದ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ಸಿದ್ದೀಕ್ ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರಣ  ಜುಲೈ 1 ರಂದು ಪೊಲೀಸ್ ನಿರೀಕ್ಷಕರಾದ ವಿವೇಕಾನಂದ ಹಾಗೂ ಪೊಲೀಸ್ ಉಪ ನಿರೀಕ್ಷಕರಾದ ಹರೀಶ್ ಎಂ ಆರ್ ಹಾಗೂ ಅಕ್ಷಯ್ ಡವಗಿ, ಸಂಜೀವ ಕೆ , ಭಾರತಿ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಹೆಚ್ ಸಿ ಗಣೇಶ ಪ್ರಸಾದ್ ಪಿ ಸಿ ಯೋಗೇಶ್ ಡಿ ಎಲ್ ಹಾಗೂ ವಿಜಯ್ ರವರು ಮಾಹಿತಿ ಸಂಗ್ರಹಿಸಿ ಕೇರಳ ಗಡಿ ಭಾಗದ ತಲಪಾಡಿ ಎಂಬಲ್ಲಿ ದಸ್ತಗಿರಿ ಮಾಡಿಕೊಂಡು ಬಂದು ಇಂದು ಜುಲಾಯಿ 2 ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿ ಸಿದ್ದೀಕ್ ಗೆ ನ್ಯಾಯಾಂಗ ಬಂಧನ ವಿಧಿಸಿದೆ.