Tuesday, January 21, 2025
ಸುದ್ದಿ

ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ : ಮಹತ್ವದ ವಿಚಾರ ಪ್ರಸ್ತಾಪಿಸಿದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ – ಕಹಳೆ ನ್ಯೂಸ್

ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ವಿಧಾನಸೌಧಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಆಗಮಿಸಿದ್ದು ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲ ಗೆಹ್ಲೋಟ್ ಅವರನ್ನು ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ವಿಧಾನಮಂಡಲ ಅಧಿವೇಶನ ಹಿನ್ನೆಲೆ ವಿಧಾನಸೌಧಕ್ಕೆ ಆಗಮಿಸುವ ರಾಜ್ಯಪಾಲರನ್ನು ಸ್ವಾಗತಿಸಲು ಸ್ಪೆಷಲ್ ಮ್ಯೂಸಿಕ್ ಏರ್ಪಡಿಸಲಾಗಿತ್ತು.

ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಗೆಹ್ಲೋಟ್ ಭಾಷಣ ಮಾಡಿದ್ದು, ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ 3 ಸಾವಿರ ರೂ. ಹಣ ನೀಡಲಾಗುತ್ತೆ. ನಿರುದ್ಯೋಗಿ ಡಿಪ್ಲೋಮಾದಾರರ ಖಾತೆಗೆ ತಿಂಗಳಿಗೆ 1,500 ರೂ. ಹಾಕಲಾಗುತ್ತೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಕೊಡಲಾಗುತ್ತೆ.
ಈ ಯೋಜನೆಯಿಂದ ಸುಮಾರು 2.14 ಕೋಟಿ ಕುಟುಂಬಕ್ಕೆ ಅನುಕೂಲ ಆಗಲಿದೆ. ಮಹಿಳಾ ಸಬಲೀಕರಣಕ್ಕಾಗಿ ಗೃಹಲಕ್ಷ್ಮೀ ಯೋಜನೆ ಜಾರಿ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ. ಹಾಕಲಾಗುತ್ತೆ ಎಂದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ವಿವರಿಸಿದರು. ಹಾಗೂ ನನ್ನ ಸರ್ಕಾರ ಆಡಳಿತವನ್ನು ಪವಿತ್ರ ಕರ್ತವ್ಯ ಎಂದು ಪರಿಗಣಿಸುತ್ತೆ. ಸರ್ಕಾರ ಬಡವರು, ಆರ್ಥಿಕ ಹಿಂದುಳಿದವರ ಪರವಾಗಿ ನಿಲ್ಲುತ್ತದೆ.

ಬಸವಣ್ಣನ ತತ್ವದಡಿ ರಾಜ್ಯ ಸರ್ಕಾರ ನಡೆಯುತ್ತಿದೆ. ಸರ್ಕಾರ ಎಲ್ಲಾ ಸಮುದಾಯಗಳ ಪರವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ. ಕುವೆಂಪು ಅವರ ಸರ್ವಜನಾಂಗದ ಶಾಂತಿ ತೋಟ ತತ್ವದಡಿ ಕೆಲಸ ಮಾಡುತ್ತಿದ್ದೇವೆ. ಬಸವಣ್ಣ, ಸರ್ವಜ್ಞ ಸೇರಿ ಅನೇಕ ಸಂತರು ಶಾಂತಿ ತತ್ವ ಪಾಲನೆ ಮಾಡಲಾಗುತ್ತಿದೆ. ಇಂದಿರಾ ಕ್ಯಾಂಟೀನ್ ಮೂಲಕ ಸರ್ಕಾರ ಹಸಿವು ಮುಕ್ತ ಮಾಡಲಿದೆ. ಬಡವರು, ದುಡಿಯುವ ವರ್ಗದ ಜನರು, ವಲಸೆ ಕಾರ್ಮಿಕರು ಮುಂತಾದವರ ಹಸಿವು ತಣಿಸಲು ಇಂದಿರಾ ಕ್ಯಾಂಟೀನ್ ಸ್ಥಾಪನೆ ಮಾಡಲಾಗಿದೆ. ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ಹಣ ನೀಡಲಾಗುತ್ತೆ ಎಂದಿದ್ದಾರೆ.