Recent Posts

Sunday, January 19, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿರುವ ಸಿದ್ದರಾಮಯ್ಯ : ಪ್ರಮುಖ ಘೋಷಣೆಗಳ ಮಾಹಿತಿ –ಕಹಳೆ ನ್ಯೂಸ್

ಸಿದ್ದರಾಮಯ್ಯನವರ ಹೊಸ ಸರ್ಕಾರದ ಪೂರಕ ಬಜೆಟ್ ಮಂಡನೆ ಆರಂಭವಾಗಿದ್ದು 14ನೇ ಬಾರಿ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯನವರ ಮೇಲೆ ರಾಜ್ಯದ ಜನರ ಚಿತ್ತ ನೆಟ್ಟಿದೆ.. ಸರ್ಕಾರ ಘೋಷಿಸಿರುವ ಐದು ಗ್ಯಾರಂಟಿಗಳು ರಾಜ್ಯದ ಜನರ ನಿರೀಕ್ಷೆಯನ್ನ ಹೆಚ್ಚಿಸಿದೆ.

ಕಾಂಗ್ರೆಸ್‌ನ 5 ಗ್ಯಾರಂಟಿ ಯೋಜನೆಗಳಿಗೆ 59,000 ಕೋಟಿ ರೂಪಾಯಿ ವೆಚ್ಚ ಮತ್ತು ಪ್ರಸ್ತುತ ಬಜೆಟ್‌ನ ವೆಚ್ಚ 3.39 ಲಕ್ಷ ಕೋಟಿ ರೂಪಾಯಿ ಎಂದು ಸಿದ್ದರಾಮಯ್ಯ ಈ ಹಿಂದೆಯೇ ಬಹಿರಂಗ ಪಡಿಸಿದ್ದರು. ಮಾಜಿ ಸಿಎಂ ಬೊಮ್ಮಾಯಿ ಈ ವರ್ಷದ ಫೆಬ್ರವರಿಯಲ್ಲಿ 3.09 ಲಕ್ಷ ಕೋಟಿ ರೂಪಾಯಿಗಳ ಪೂರಕ ಬಜೆಟ್ ಮಂಡಿಸಿದ್ದರು. 2023-24 ರ ಹಣಕಾಸು ವರ್ಷದ ಎರಡನೇ ಬಜೆಟ್ ಇದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನೀರಿನ ಸಮಸ್ಯೆ ನೀಗಿಸಲು ಕೆರೆಗಳನ್ನು ತುಂಬಿಸಲು ನಿರ್ಧಾರ

ಜಾಹೀರಾತು
ಜಾಹೀರಾತು
ಜಾಹೀರಾತು

ಕುಡಿಯುವ ನೀರು ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸರ್ಕಾರ ಮುಂದಾಗಿದ್ದು, 172 ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸರ್ಕಾರ ನಿರ್ಧರಿಸಿದೆ. 19 ಕೆರೆಗಳಿಗೆ ನೀರು ತುಂಬಿಸಲು 770 ಕೋಟಿ ಹಣ ಮೀಸಲು ಇಡಲಾಗಿದೆ. ಬೆಳಗಾವಿ, ದಾವಣಗೆರೆ, ಬಳ್ಳಾರಿ, ಹಾವೇರಿ, ಗದಗ, ಬೀದರ್, ಉತ್ತರ ಕನ್ನಡ, ವಿಜಯನಗರ, ಕೊಪ್ಪಳ, ಕಲಬುರಗಿ ಹಾಗೂ ಯಾದಗಿರಿ ಸೇರಿ ಒಟ್ಟು 823,99 ಕೆರೆಗಳನ್ನು ತುಂಬಿಸಲು ನಿರ್ಧಾರ ಮಾಡಲಾಗಿದೆ.

ಆರೋಗ್ಯ ಕ್ಷೇತ್ರಕ್ಕೆ ಕೊಡುಗೆ

ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಲಾಗಿದ್ದು, ಕೊಪ್ಪಳ, ಕಾರವಾರ ಕೊಡುಗು ಜಿಲ್ಲಾಸ್ಪತ್ರೆಯ ಉನ್ನತಿಕರಣಕ್ಕೆ ನಿರ್ಧಾರ ಮಾಡಲಾಗಿದೆ. ಕನಕಪುರ ತಾಲೂಕಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, ಮೈಸೂರು, ಕಲಬುರಗಿ, ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ದೇಶದಲ್ಲೇ ಮೊದಲ ಅಂಗಾಗ ಜೋಡಣೆ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ಮೈಸೂರು ಮತ್ತು ಕಲಬುರ್ಗಿಯಲ್ಲಿ 30 ಕೋಟಿ ವೆಚ್ಚದಲ್ಲಿ ಟ್ರಾಮಾ ಕೇರ್ಸ ಸೆಂಟರ್ ತೆರೆಯಲಾಗುವುದು.

ಬೆಂಗಳೂರಿಗೆ 45,000 ಕೋಟಿ ಅನುದಾನ ಘೋಷಿಸಿದ ಸಿಎಂ

ಬೆoಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ, ಬಜೆಟ್‌ನಲ್ಲಿ ಬೆಂಗಳೂರಿಗೆ ಬರೊಬ್ಬರಿ 45 ಸಾವಿರ ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಬೆಂಗಳೂರು ವೈಟ್ ಟಾಪಿಂಗ್, ರಸ್ತೆ ಅಭಿವೃದ್ಧಿ, ನಗರೋತ್ಥಾನ, ತಾಜ್ಯ ನಿರ್ವಹಣೆ, ರಾಜಕಾಲುವೆ ತೆರವು & ದುರಸ್ತಿಗೆ ಅನುದಾನ, ಮೆಟ್ರೋ, ಬೆಂಗಳೂರು ಉಪನಗರ ರೈಲ್ವೆ ಯೋಜನೆ, ಬ್ರ‍್ಯಾಂಡ್ ಬೆಂಗಳೂರಿಗೆ ಆಧ್ಯತೆ ನೀಡುವ ನಿಟ್ಟಿನಲ್ಲಿ 45 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ.

ಎತ್ತಿನ ಹೊಳೆ ಯೋಜನೆ

ಹಿಂದಿನ ಸರ್ಕಾರದ ನೀರಾವರಿ ಯೋಜನೆಯನ್ನ ಕೈ ಬಿಡಲು ಸರ್ಕಾರ ನಿರ್ಧಾರ ಮಾಡಿದೆ. 19 ಕೆರೆ ತುಂಬಿಸು ಯೋಜನೆಗೆ ಬರೊಬ್ಬರಿ 770 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಯಾದಗಿರಿ ಸೇರಿ 15 ಜಿಲ್ಲೆಯ 99 ಕೆರೆಗಳಿಗೆ ನೀರು ತುಂಬಿಸಲು ಯೋಜನೆ ಜಾರಿ ಮಾಡಲಾಗಿದ್ದು, ಎತ್ತಿನ ಹೊಳೆ ಯೋಜನೆಗೆ ಪರಿಷ್ಕೃತ ಮೊತ್ತ 22,252 ಕೋಟಿ ಮೀಸಲಿಡಲಾಗಿದೆ. ಇನ್ನು ಮೇಕೆದಾಟು ಯೋಜನೆಗೆ ಭೂಸ್ವಾಧಿನ ಪ್ರಕ್ರಿಯೆಗೆ ಚಾಲನೆ ನೀಡಲು ನಿರ್ಧಾರ ಮಾಡಲಾಗಿದೆ.

ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿ ಏರಿಕೆ

ರೈತರಿಗೆ ಶೂನ್ಯ ಬಡಿದರದ ಸಾಲ ಮಿತಿಯನ್ನ 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ಜೊತೆಗೆ ಮಧ್ಯಮಾವಧಿ, ದೀರ್ಘಾವಧಿ ಸಾಲ ಮಿತಿಯನ್ನ 10 ಲಕ್ಷದಿಂದ 15 ಲಕ್ಷಕ್ಕೆ ಏರಿಸಲಾಗಿದ್ದು, ಗುಡ್ಡಗಾಡು ಪ್ರದೇಶದ ರೈತರಗೆ ಪಿಕ್ ವ್ಯಾನ್ ಖರೀದಿಗೆ 7 ಲಕ್ಷದವರೆಗೆ ಸಾಲ ನೀಡಲಾಗುವುದು.

ಕಲಿಕಾ ಬಲವರ್ಧನೆ ಕಾರ್ಯಕ್ರಮ

ಸುಮಾರು 33 ಲಕ್ಷ ವಿದ್ಯಾರ್ಥಿಗಳಿಗೆ 80 ಕೋಟಿ ರೂ.ಗಳ ವೆಚ್ಚದಲ್ಲಿ ಕಲಿಕಾ ಬಲವರ್ಧನೆ ಕಾರ್ಯಕ್ರಮ ಆಯೋಜಿಸಲು ನಿರ್ಧಾರಮಾಡಲಾಗಿದೆ. ‘ಮರುಸಿಂಚನ’ ಎಂಬ ಹೊಸ ಯೋಜನೆಯಡಿಯಲ್ಲಿ ಕಲಿಕೆಯಲ್ಲಿ ಹಿಂದುಳಿದ ಒಂದೂವರೆ ಲಕ್ಷ ವಿದ್ಯಾರ್ಥಿಗಳನ್ನು ಪ್ರೌಢ ಹಂತದ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ಯೋಜನೆ ರೂಪಿಸಲಾಗಿದೆ.

ಶಿಕ್ಷಣ ಕ್ಷೇತ್ರ

– ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ನಿರ್ವಹಣೆಗಾಗಿ ನೀಡುತ್ತಿರುವ ಅನುದಾನವನ್ನು ಕನಿಷ್ಠ 20,000 ರೂ ದಿಂದ 45,000 ರೂ. ಗಳವರೆಗೆ ಹೆಚ್ಚಳ. 47,272 ಶಾಲೆಗಳು ಹಾಗೂ 1231 ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ಒಟ್ಟಾರೆ 153 ಕೋಟಿ ರೂ. ಅನುದಾನ . ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಮೊಟ್ಟೆ/ ಶೇಂಗಾ ಚಿಕ್ಕಿ/ ಬಾಳೆಹಣ್ಣನ್ನು ವಿತರಿಸಲಾಗುತ್ತಿದ್ದು, ಈಗ ವಾರದಲ್ಲಿ ಎರಡು ದಿವಸ ವಿತರಿಸಲಾಗುವುದು. ಪ್ರಸಕ್ತ ಸಾಲಿನಿಂದ ಈ ಯೋಜನೆಯನ್ನು 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಿ 280 ಕೋಟಿ ರೂ. ವೆಚ್ಚದಲ್ಲಿ 60 ಲಕ್ಷ ಮಕ್ಕಳಿಗೆ ಒದಗಿಸಲಾಗುವುದು.

ಎಪಿಎಂಸಿ ಕಾಯಿದೆ ವಾಪಸ್

ಎಪಿಎಂಸಿ ಕಾಯಿದೆ ವಾಪಸ್ ತೆಗೆದುಕೊಳ್ಳುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ.

ಇಂದಿರಾ ಕ್ಯಾಂಟೀನ್‌ಗೆ 100 ಕೋಟಿ ರೂ. ಘೋಷನೆ ಮಾಡಲಾಗಿದ್ದು, ನಂದಿನಿ ಮಾದರಿಯಲ್ಲಿ ಏಕೀಕೃತ ಬ್ರ‍್ಯಾಂಡಿಗ್‌ಗೆ 10 ಕೋಟಿ ರೂ ಹಾಗೂ ಕಿರು ಆಹಾರ ಸಂಸ್ಕರಣಾ ಉದ್ದಿಮಿದಾರರಿಗೆ 5 ಕೋಟಿ ರೂ. ಘೋಷಣೆ ಮಾಡಲಾಗಿದೆ.

ಅಬಕಾರಿ ತೆರಿಗೆ ಹೆಚ್ಚಳ

ಅಬಕಾರಿ ತೆರಿಗೆಯನ್ನ ಶೇಕಡಾ 20ರಷ್ಟು ಹೆಚ್ಚಳ ಮಾಲಾಗಿದ್ದು, ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ 10 ರಷ್ಟು ಹೆಚ್ಚಳ ಮಾಡಲಾಗಿದೆ.