ಮಂಗಳೂರು: ಬೈಕ್ ಚಲಾಯಿಸುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಕೊಲ್ಯದಲ್ಲಿ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ದೇವದಾಸ್ ಶ್ರೀಯಾನ್ ಹೃದಯಾಘಾತಕ್ಕೆ ಬಲಿಯಾದವರು.
ನಿನ್ನೆ ಸಂಜೆ ಮನೆಯಿಂದ ಕೋಟೆಕಾರಿಗೆ ತೆರಳಿ ಮನೆಗೆ ಹಿಂತಿರುಗುವಾಗ ಘಟನೆ ನಡೆದಿದೆ. ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ದಾರಿ ಮಧ್ಯದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.
ಕೋಟೆಕಾರ್ ಪಟ್ಟಣ ಪಂಚಾಯತಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕಾರ್ಯನಿರ್ವಾಹಿಸುತ್ತಿದ್ದ ಶ್ರೀಯಾನ್, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.