ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜುಲೈ 16ರಿಂದ ಆರಂಭವಾಗಲಿದ್ದು. ಆಗಸ್ಟ್ 15 ಇಲ್ಲವೇ 16 ರಂದು ನಿಮ್ಮ ಖಾತೆಗೆ ಹಣ ಬರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಜೆಟ್ ಮಂಡನೆ ನಂತರ ಮಾತನಾಡಿದ ಅವರು ಈ ಬಜೆಟ್ 5 ಗ್ಯಾರಂಟಿಗಳು ಮತ್ತು ನಮ್ಮ ಚುನಾವಣಾ ಪ್ರಣಾಳಿಕೆಗಳಲ್ಲಿ ತಿಳಿಸಿದ್ದ ಭರವಸೆಗಳನ್ನು ಒಳಗೊಂಡಿದೆ. ಇದು ಗ್ಯಾರಂಟಿ ಬಜೆಟ್ ಆಗಿದೆ ಎಂದು ತಿಳಿಸಿದರು.
ನಾನು ಮಂಡನೆ ಮಾಡಿರುವ ಬಜೆಟ್ ಪೂರ್ಣ ಪ್ರಮಾಣದ ಬಜೆಟ್ ಆಗಿದೆ ಜನ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.