ಇಸ್ರೋದ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್‍ಗೆ ಲಘು ಹೃದಯಾಘಾತ : ಶ್ರೀಲಂಕಾದಿಂದ ಬೆಂಗಳೂರಿಗೆ ಶಿಫ್ಟ್ – ಕಹಳೆ ನ್ಯೂಸ್
ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಡಾ ಕೆ ಕಸ್ತೂರಿರಂಗನ್ ಅವರಿಗೆ ಲಘು ಹೃದಯಾಘಾತ ಸಂಭವಿಸಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಕರೆತರಲಾಗಿದೆ.
ಶ್ರೀಲಂಕಾದಿಂದ ಬೆಂಗಳೂರಿಗೆ ವಿಮಾನದ ಮೂಲಕ ಬಂದ ಬಳಿಕ ಜೀರೋ ಟ್ರಾಫಿಕ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್: ಕಸ್ತೂರಿರಂಗನ್ ಅವರು ತೀವ್ರ ಅಸ್ವಸ್ಥರಾಗಿದ್ದು, ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಬುಲೆಟಿನ್ ಬಿಡುಗಡೆ ಮಾಡಿದೆ.
ಶ್ರೀಲಂಕಾದ ಕೊಲಂಬೊಗೆ ತೆರಳಿದ್ದ ಕಸ್ತೂರಿ ರಂಗನ್ ಅವರಿಗೆ ಲಘು ಹೃದಯಾಘಾತವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ವಿಶೇಷ ವಿಮಾನದ ಮೂಲಕ ಅವರನ್ನು ಬೆಂಗಳೂರಿಗೆ ಬಂದಿದ್ದು, ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯಲಿದೆ. ಹೃದಯಾಘಾತದ ಹಿನ್ನೆಲೆಯಲ್ಲಿ ಇಂದು ಸಂಜೆ 5.30ಕ್ಕೆ ಕೊಲಂಬೊದಿಂದ ಹೆಚ್‍ಎಎಲ್ ನಿಲ್ದಾಣಕ್ಕೆ ವಿಮಾನಕ್ಕೆ ಬರಬೇಕಿತ್ತು. ಆದರೆ, ಕೆಲ ಕಾರಣಗಳಿಂದ ತಡವಾಗಿ ವಿಮಾನ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹೆಚ್‍ಎಎಲ್‍ಗೆ ಬಂದ ಬಳಿಕ ಅಲ್ಲಿಂದ ನೇರವಾಗಿ ಹಾಗೂ ತುರ್ತಾಗಿ ತಲುಪಲು ಸಂಚಾರ ಪೆÇಲೀಸರು ಗ್ರೀನ್ ಕಾರಿಡಾರ್ ಮಾಡುವ ಮೂಲಕ ಕ್ರಮ ಕೈಗೊಂಡಿದ್ದರು. ಖ್ಯಾತ ವೈದ್ಯ ಡಾ. ದೇವಿಶೆಟ್ಟಿ ಅವರು ಕಸ್ತೂರಿರಂಗನ್ ಅವರಿಗೆ ಚಿಕಿತ್ಸೆ ನೀಡಲಿದ್ದಾರೆ. ಕಸ್ತೂರಿ ರಂಗನ್ ಅವರಿಗೆ 83 ವರ್ಷ ವಯಸ್ಸಾಗಿದ್ದು, ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.