Thursday, January 23, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ಆ.16ರಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ `ಗೃಹಲಕ್ಷ್ಮೀ ಯೋಜನೆ’ ಜಾರಿಗೆ : ಸಿಎಂ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 16 ರಂದು ಜಾರಿ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ಹಣ ನೀಡುವ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, 5 ಗ್ಯಾರಂಟಿಗಳ ಪೈಕಿ ಈಗಾಗಲೇ ಅನ್ನಭಾಗ್ಯ, ಗೃಹಜ್ಯೋತಿ, ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದೆ. ಗೃಹಲಕ್ಷ್ಮೀ ಯೋಜನೆಗೆ ಆ.16 ಕ್ಕೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕುಟುಂಬದ ಯಾವ ಯಜಮಾನಿಗೆ ಹಣ ಸಂದಾಯ ಮಾಡಬೇಕು ಎಂದು ನಿರ್ಧಾರ ಮಾಡಲು ಸಮಯ ಬೇಕಾಗಿದೆ. ಅರ್ಜಿ ನೋಂದಣಿ ಮಾಡಿಕೊಳ್ಳಲು ಸಮಯ ಬೇಕು. ಆದ್ದರಿಂದ ಆಗಸ್ಟ್ 16 ರಿಂದ ಕುಟುಂಬದ ಯಜಮಾನಿಗೆ 2 ಸಾವಿರ ರೂ. ನಂತೆ ಹಣ ಕೊಡುತ್ತೇವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು